ಕೆಎಸ್​ಆರ್​ಟಿಸಿ ಬಸ್​, ಎರಡು ಕಾರುಗಳ ನಡುವೆ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ವಿಜಯಪುರ: ಗಣೇಶ ಚತುರ್ಥಿಯ ದಿನವಾದ  ಬುಧವಾರ (ಆಗಸ್ಟ್‌ 31) ಸಂಜೆ  ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕುಬಕಡ್ಡಿ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಣಂತಿ ಹಾಗೂ ಮೂರು ತಿಂಗಳು ಮಗು ಸೇರಿ ಮೂವರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕಲಬುರಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ (25), ಅವರ ಮೂರು ತಿಂಗಳ ಮಗಳು ಸುಮನ್ ಹಾಗೂ ಶರಣಮ್ಮ ಬಸವರಾಜ ಕಲಶೆಟ್ಟಿ (55) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಕಾರು ಚಾಲಕ, ಇಬ್ಬರು ಮಕ್ಕಳು ಹಾಗೂ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ.
ಕಾರಿನ ಚಾಲಕ, ಮತ್ತೊಂದು ಕಾರನ್ನು ಓವರ್​ಟೇಕ್​ ಮಾಡುವಾಗ ಈ ಅವಘಡ ಸಂಭವಿಸಿದೆ. ಕಾರು ಓವರ್ ಟೇಕ್ ಮಾಡುವಾಗ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ನಂತರ ಅದು ಬಸ್​ಗೆ ಗುದ್ದಿದೆ ಎಂದು ಹೇಳಲಾಗಿದೆ. ಕಾರಿನ ಹಿಂಬದಿ ನುಜ್ಜುಗುಜ್ಜಾಗಿದೆ.
ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement