ಸೆಪ್ಟೆಂಬರ್‌ 20ರ ವರೆಗೆ ಪಾಲಿಟೆಕ್ನಿಕ್ ಪ್ರವೇಶಾವಧಿ ವಿಸ್ತರಣೆ

ಬೆಂಗಳೂರು: 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಸೆಪ್ಟೆಂಬರ್ ತಿಂಗಳ 20ರ ವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ 62 ಸರ್ಕಾರಿ, 34 ಅನುದಾನಿತ ಪಾಲಿಟೆಕ್ನಿಕ್ʼಗಳಲ್ಲಿ ಪ್ರವೇಶಾವಕಾಶವನ್ನು ಸೆಪ್ಟೆಂಬರ್‌  20ರ ಸಂಜೆ ಕಚೇರಿ ಅವಧಿ ವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶ ಪಡೆದುಕೊಂಡು ದಾಖಲಾಗಬೇಕು ಎಂದು ಸಚಿವರು ತಿಳಿಸಿದ್ದಾರೆ.
ಪ್ರವೇಶಾವಧಿಯನ್ನು ವಿಸ್ತರಣೆ ಮಾಡುವಂತೆ ಎಲ್ಲ ಪಾಲಿಟೆಕ್ನಿಕ್ʼಗಳ ಪ್ರಾಂಶುಪಾಲರು ಕೋರಿಕೆ ಸಲ್ಲಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement