ಭಾರತದಲ್ಲಿ ಇಳಿಕೆ ಕಂಡ ಕೊರೊನಾ ಹೊಸ ಸೋಂಕಿತರ ಸಂಖ್ಯೆ, ಸಾವಿನ ಪ್ರಮಾಣ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,949 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,10,26,829ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 542 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 4,12,531 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 4,30,422 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 24 ಗಂಟೆಯಲ್ಲಿ 40,026 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,01,83,876 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಕಳೆದ 24ಗಂಟೆಯಲ್ಲಿ 38,78,078 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ. ದೇಶದಲ್ಲಿ ಈವರೆಗೆ 39,53,43,767 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಲಸಿಕೆ ಕೊರತೆ ನೀಗಿಸಲು ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ: ಕೊರೊನಾ ಎರಡನೇ ಅಲೆ ಆರ್ಭಟ ತಣ್ಣಗಾಗತೊಡಗಿದ್ದು, ಈಗ ಮೂರನೇ ಅಲೆ ಭೀತಿ ಎದುರಾಗಿದೆ. ಇದನ್ನು ತಹಬಂದಿಗೆ ತರಬೇಕೆಂದರೆ ಅದಷ್ಟು ಶೀಘ್ರದಲ್ಲೇ ಎಲ್ಲರಿಗೂ ಲಸಿಕೆ ನೀಡುವಂತಾಗಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರ 14,505 ಕೋಟಿ ರೂಪಾಯಿ ಮೌಲ್ಯದ 66 ಕೋಟಿ ಕೋವಿಡ್‌ ಲಸಿಕೆಗಳಿಗೆ ಆರ್ಡರ್‌ ಮಾಡಿದೆ. ಕೋವಿಶೀಲ್ಡ್‌ ಹಾಗೂ ಕೋವ್ಯಾಕ್ಸಿನ್‌ ಲಸಿಕೆಗಳ ಪೂರೈಕೆಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಕೊರೊನಾ ಸಾಮಾನ್ಯ ಗುಣಲಕ್ಷಣಗಳ ಮಾಹಿತಿ ಪ್ರಕಟ: ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದಿಂದ ಕೊರೊನಾದ ಸಾಮಾನ್ಯ ಲಕ್ಷಣಗಳು ಕುರಿತು ಮತ್ತೊಮ್ಮೆ ಮಾಹಿತಿ ಪ್ರಕಟಿಸಲಾಗಿದೆ. ಜ್ವರ, ಒಣ ಕೆಮ್ಮು, ನಿಶ್ಯಕ್ತಿ, ರುಚಿ ಮತ್ತು ವಾಸನೆ ಕಳೆದುಕೊಳ್ಳುವಿಕೆ, ಚರ್ಮದ ತುರಿಕೆ, ಕಣ್ಣು ಉರಿ, ಊತ, ತಲೆನೋವು ಕಾಣಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement