ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ ; ವಿಚಾರಣೆಗೆ ಹಾಜರಾದ ನಟ ದರ್ಶನ್

ಬೆಂಗಳೂರು: ಮಹಿಳೆಯೊಬ್ಬರಿಗೆ ದರ್ಶನ ಮನೆಯ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ.15 ರಂದು ಬುಧವಾರ ನಟ ದರ್ಶನ್​ ಅವರು ರಾಜರಾಜೇಶ್ವರಿ​ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಮಹಿಳೆ ಮೇಲೆ ದರ್ಶನ್ ಮನೆಯ ಸಾಕು ನಾಯಿ ದಾಳಿ ನಡೆಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ದರ್ಶನ ವಿರುದ್ಧವೂ ದೂರು ದಾಖಲಿಸಿದ್ದರು. ಮಹಿಳೆ ನೀಡಿದ ದೂರಿನ ಮೇರೆಗೆ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಕೆಲವು ದಿನಗಳ ಹಿಂದೆ ಪೊಲೀಸರು ಸ್ಥಳ ಮಹಜರು ಕೂಡ ನಡೆಸಿದ್ದರು.
ಪ್ರಕರಣದ ಎ2 ಆರೋಪಿ ಆಗಿರುವ ದರ್ಶನ್ ಅವರಿಗೆ ಆರ್‌.ಆರ್‌.ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ನಟ ದರ್ಶನ್ ನ.15ರಂದು ತನಿಖಾಧಿಕಾರಿ ಇನ್ಸ್​​ಪೆಕ್ಟರ್ ಶಿವಕುಮಾರ್ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಏನಿದು ಪ್ರಕರಣ?
ಅಮಿತಾ ಜಿಂದಾಲ್ ಎನ್ನುವ ಮಹಿಳೆ ಕಾರ್ಯಕ್ರಮವೊಂದಕ್ಕೆ ರಾಜರಾಜೇಶ್ವರಿ ನಗರಕ್ಕೆ ಬಂದಿದ್ದರು. ಈ ವೇಳೆ ಅವರು ನಟ ದರ್ಶನ್ ಅವರ ಮನೆಯ ಬಳಿ ಕಾರು ಪಾರ್ಕಿಂಗ್ ಮಾಡಿದ್ದರು.
ಕಾರ್ಯಕ್ರಮ ಮುಗಿದ ನಂತರ ಕಾರು ತೆಗೆದುಕೊಳ್ಳಲು ಹೋದಾಗ ಅಲ್ಲಿ ದರ್ಶನ್ ಮನೆಯ ನಾಯಿಗಳಿದ್ದವು. ಒಂದು ನಾಯಿ ಅಮಿತಾ ಅವರ ಮೇಲೆ ಮೇಲೆ ದಾಳಿ ಮಾಡಿದೆ. ಅದನ್ನು ನೋಡಿದರೂ ದರ್ಶನ್ ಮನೆಯ ಸಿಬ್ಬಂದಿ ಸುಮ್ಮನಿದ್ದರು ಎಂದು ಅವರು ಆರೋಪಿಸಿದ್ದಾರೆ.
ಈ ಸಂಬಂಧ ಅವರು ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ನೀಡಿದ್ದು, ದರ್ಶನ್ ಮನೆಯ ಸಿಬ್ಬಂದಿ ಎ1 ಆರೋಪಿಯಾಗಿದ್ದರೆ, ದರ್ಶನ್ ಎ2 ಆರೋಪಿಯಾಗಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement