ಕೊರೊನಾ ಹೆಚ್ಚಳ ಆತಂಕ: ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.
ಗುರುವಾರದಿಂದ (ಮಾ.೧೧) ರಾಜ್ಯಾದ್ಯಂತ, ಪ್ರಮುಖವಾಗಿ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ ರಾತ್ರಿ ಹೊತ್ತು ಪಾರ್ಟಿಗಳನ್ನು ನಡೆಸುವುದರ ಮೇಲೆ ನಿಷೇಧ ಹೇರಿದ್ದು, ಸ್ಟಾರ್ ಹೋಟೆಲ್, ರೆಸ್ಟೊರೆಂಟ್‍ಗಳಿಗೆ ಸೂಚಿಸಿರುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಪಾರ್ಟಿಗಳು ಕೊರೊನಾ ಸೋಂಕು ಹರಡುವ ಎಲ್ಲ ಸಾಧ್ಯತೆಗಳಿರುವುದರಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ಆದೇಶದವರೆಗೂ ಈ ನಿಷೇಧ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ. ಮದುವೆ ಕಾರ್ಯಕ್ರಮಗಳು ಹಾಗೂ ಹೆಚ್ಚು ಜನರು ಸೇರುವ ಎಲ್ಲಾ ಕಾರ್ಯಕ್ರಮಗಳ ಮೇಲೂ ನಿಗಾ ಇಡಲಾಗಿದೆ ಎಂದು ಹೇಳಿದ್ದಾರೆ.
ನೆರೆ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗಿರುವುದರಿಂದ ರಾಜ್ಯಾದ್ಯಂತ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಬುಧವಾರ 760 ಹೊಸ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿಯೇ 488 ಪ್ರಕರಣಗಳು ದಾಖಲಾಗಿವೆ.
331 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement