ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 3-4 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕ ಸ್ಟೇಟ್ ನ್ಯಾಚರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ (ಕೆಎಸ್‌ಎನ್‌ಡಿಎಂಸಿ) ಐದು ದಿನಗಳ ಮುನ್ಸೂಚನೆ ನೀಡಲಾಗಿದೆ.
ಅಕ್ಟೋಬರ್ 10ರಂದು 12 ಜಿಲ್ಲೆಗಳಲ್ಲಿ ಮಳೆಯಾಗುವ (Hevay Rain) ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಕೆಎಸ್‌ಎನ್‌ಡಿಎಂಸಿ ಪ್ರಕಾರ, ಅಕ್ಟೋಬರ್ 10ರಂದು ರಾಜ್ಯದಾದ್ಯಂತ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಹಗುರಿನಿಂದ ಸಾಧಾರಣ ಮಳೆ, ಮತ್ತು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡುಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಬೀಳಬಹುದು.
ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದೆ. ಬೆಳಗಾವಿ, ವಿಜಯಪುರ, ರಾಯಚೂರು, ಬೀದರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಂಗಳೂರಿನಲ್ಲೂ ಮಳೆ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 12ರವರೆಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಗಾಳಿ ವೇಗ 30-40 ಕಿ.ಮೀ. ಪ್ರಮಾಣದಲ್ಲಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಅಕ್ಟೋಬರ್ 10ರಂದು ಹಗುರಿ ಮಳೆ ಅಥವಾ ಗುಡುಗು ಗಾಳಿಯೊಂದಿಗೆ ಮಳೆ  ಸಾಧ್ಯತೆಯಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement