ಯುದ್ಧ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಆಕಸ್ಮಿಕ

ನವ ದೆಹಲಿ: ಭಾರತದ ಪ್ರಮುಖ ಯುದ್ಧ ವಿಮಾನ ವಾಹಕ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಶನಿವಾರ ಮುಂಜಾನೆ ಅಗ್ನಿ ಅನಾಹುತ ಸಂಭವಿಸಿದೆ.
ಕಾರವಾರ ಬಂದರಿನಲ್ಲಿ ಈ ಗಟನೆ ನಡೆದಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಐಎನ್‌ಎಸ್ ವಿಕ್ರಮಾದಿತ್ಯ ನೌಕೆಯಲ್ಲಿರುವ ನಾವಿಕರು ತಂಗುವ ಕೊಠಡಿಗಳಿರುವ ಭಾಗದಿಂದ ಹೊಗೆ ಬರುತ್ತಿರುವುದನ್ನು ನೌಕಾದಳದ ಸಿಬ್ಬಂದಿ ಗಮನಿಸಿದರು. ಕೂಡಲೇ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳೆಲ್ಲರೂ ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಇದರಿಂದ ಬೃಹತ್ ಯದ್ಧ ನೌಕೆಗೆ ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ ಎಂದು ಭಾರತೀಯ ನೌಕಾಪಡೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಳಿದ್ದಾರೆ.
ಹಡಗಿನಲ್ಲಿ ಸಿಬ್ಬಂದಿಯನ್ನು ಲೆಕ್ಕಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಅಗ್ನಿ ಆಕಸ್ಮಿಕಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.
ವಿಮಾನ ವಾಹಕ ನೌಕೆಯು ಜುಲೈ 2013 ರಲ್ಲಿ ಸಮುದ್ರ ಪ್ರಯೋಗಗಳನ್ನು ಸೆಪ್ಟೆಂಬರ್ 2013 ರಲ್ಲಿ ವಾಯುಯಾನ ಪ್ರಯೋಗಗಳನ್ನು ಪೂರ್ಣಗೊಳಿಸಿತು. ಜೂನ್ 14, 2014 ರಂದು ಐಎನ್‌ಎಸ್ ವಿಕ್ರಮಾದಿತ್ಯ ನೌಕೆಯನ್ನು ಭಾರತೀಯ ನೌಕಾಪಡೆಗೆ ಸೇರಿಸಿಕೊಳ್ಳಲಾಯಿತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement