ರಮೇಶ ಜಾರಕಿಹೊಳಿ ಆಸ್ಪತ್ರೆಯಿಂದ ಬಿಡುಗಡೆ, ಮನೆಯಲ್ಲಿಯೇ ಕ್ವಾರಂಟೈನ್‌

ಬೆಳಗಾವಿ : ಸಿಡಿ ಪ್ರಕರಣದಿಂದ ಸುದ್ದಿಯಾಗಿರುವ ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬುಧವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಮಾಜಿ ರಮೇಶ್ ಜಾರಕಿಹೊಳಿ ಏಪ್ರಿಲ್ 4ರಂದು ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಬೆಳಗಾವಿಯ ಗೋಕಾಕ್ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಏಪ್ರಿಲ್ 1ರಂದು ಕೊರೋನಾ ಸೋಂಕು ದೃಢಪಟ್ಟಿತ್ತು ಎಂದು ವರದಿಯಾಗಿತ್ತು. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಅವರು ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಇರಲಿದ್ದಾರೆ.
ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿಲ್ಲ. ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದರಿಂತ ತಪ್ಪಿಸಿಕೊಳ್ಳಲು ಅವರು ಹೀಗೆ ನಾಟಕವಾಡುತ್ತಿದ್ದಾರೆ ಎಂದು ಸಿಡಿ ಯುವತಿ ಪರ ವಕೀಲ ಜಗದೀಶ್ ಆರೋಪಿಸಿದ್ದರು. ಇದರ ಮಧ್ಯೆ ಮಂಗಳವಾರ ಎಸ್‌ಐಟಿ ಅಧಿಕಾರಿಗಳು ಗೋಕಾಕ್ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರಿಂಗ ಆರೋಗ್ಯ ಸಂಬಂಧಿ ದಾಖಲೆ ಪಡೆದು ಪರಿಶೀಲನೆ ನಡೆಸಿದ್ದರು ಎನ್ನಲಾಗಿತ್ತು.
ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ, ಗೋಕಾಕ್ ತಾಲೂಕು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಆದರೆ ಹೋಂ ಕ್ವಾರಂಟೈನ್‌ ಇರುವಂತೆ ಅವರಿಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement