ಹುಬ್ಬಳ್ಳಿ: ಶಾಸಕ ಪ್ರಸಾದ ಅಬ್ಬಯ್ಯಗೆ ಕೊರೊನಾ ಸೋಂಕು

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರ ಪ್ರತಿನಿಧಿಸುವ ಶಾಸಕ ಪ್ರಸಾದ ಅಬ್ಬಯ್ಯ ಅವರು ವೈದ್ಯರ ಸಲಹೆ ಮೇರೆಗೆ ಒಂದು ವಾರಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್‌ ಆಗಿದ್ದಾರೆ.
ತನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿಯೂ ಪ್ರಸಾದ ಅಬ್ಬಯ್ಯ ಅವರು, ಕೊರೊನಾ ಸೋಂಕಿಗೆ ಒಳಗಾಗಿ, ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ನಿಮ್ಮ ಕಾಮೆಂಟ್ ಬರೆಯಿರಿ

advertisement