ಬೆಂಗಳೂರು : ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ಐವರು ಶಂಕಿತ ಭಯೋತ್ಪಾದಕರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬೆಂಗಳೂರಿನಲ್ಲಿ ಬಂಧಿಸಿದೆ.
ಬಂಧಿತರನ್ನು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದೆ. ಅವರ ಬಳಿಯಿದ್ದ ಮೊಬೈಲ್ ಫೋನ್ಗಳ ಜೊತೆಗೆ ಹಲವಾರು ಸ್ಫೋಟಕ ಸಾಮಗ್ರಿಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಸಿಸಿಬಿಗೆ ಸಂಚಿನಲ್ಲಿ ಇನ್ನೂ ಇಬ್ಬರು ವ್ಯಕ್ತಿಗಳು ಭಾಗಿಯಾಗಿರುವ ಶಂಕೆಯಿದೆ.
2017ರ ಅಕ್ಟೋಬರ್ನಲ್ಲಿ ಬೆಂಗಳೂರಿನ ಆರ್ಟಿ ನಗರದಲ್ಲಿ ನಡೆದ ಮೂವರ ಅಪಹರಣ ಹಾಗೂ ಒಬ್ಬ ವ್ಯಕ್ತಿಯ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಅನೇಕ ಆರೋಪಿಗಳು ಉಗ್ರರೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಹೇಳಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ಸಿದ್ಧತೆ ನಡೆಸಲಾಗಿತ್ತು. ಇದಕ್ಕೆ ಬೇಕಾದ ಕಚ್ಚಾವಸ್ತುಗಳನ್ನು ಸಂಗ್ರಹಿಸಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ಸಿಸಿಬಿ ಮಾಹಿತಿ ಸಂಗ್ರಹಿಸಿದೆ. ಮಾಹಿತಿ ಮೇರೆಗೆ ಸಿಸಿಬಿ ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಇನ್ನು ಹಲವರು ಇದರಲ್ಲಿರುವ ಶಂಕೆ ಇದ್ದು, ಅವರ ಬಂಧನಕ್ಕೆ ಜಾಲ ಬೀಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ