ನವದೆಹಲಿ : ಜುಲೈ 8ರಂದು ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೇಂದ್ರ ಪಡೆಗಳನ್ನು ನಿಯೋಜಿಸಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಹಾಗೂ ಚುನಾವಣೆಯು ಹಿಂಸಾಚಾರಕ್ಕೆ ಪರವಾನಗಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ.
“ನೀವು ಮೇಲಿನ ಹಂತದಿಂದ ಕೆಳಗಿನ ಹಂತದ ವರೆಗೂ ಚುನಾವಣೆಗೆ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಹೊಂದಿದ್ದೀರಿ ಎಂದು ನಾವು ಪ್ರಶಂಸಿಸುತ್ತೇವೆ, ಆದರೆ ಚುನಾವಣೆಗಳಲ್ಲಿ ಹಿಂಸಾಚಾರವನ್ನು ಅನುಸರಿಸಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೇಂದ್ರ ಪಡೆಗಳ ನಿಯೋಜನೆಯನ್ನು ನಿರ್ದೇಶಿಸುವ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಟುವಾದ ಪ್ರತಿಕ್ರಿಯೆ ನೀಡಿದೆ. ಉಚ್ಚ ನ್ಯಾಯಾಲಯದ ಆದೇಶದ ಉದ್ದೇಶವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸುವುದಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
“ಹೈಕೋರ್ಟ್‌ನ ಆದೇಶವು ಯಾವುದೇ ಹಸ್ತಕ್ಷೇಪಕ್ಕೆ ಕರೆ ನೀಡಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಮನೋಜ ಮಿಶ್ರಾ ಅವರಿದ್ದ ಪೀಠ ಹೇಳಿದೆ.
ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಭದ್ರತೆಗಾಗಿ ಕೇಂದ್ರ ಪಡೆಗಳನ್ನು ನಿಯೋಜಿಸಲು ನಿರ್ದೇಶನ ನೀಡಿದ ಕೋಲ್ಕತ್ತಾ ಹೈಕೋರ್ಟ್‌ನ ಆದೇಶವನ್ನು ಪಶ್ಚಿಮ ಬಂಗಾಳ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಪ್ರಶ್ನಿಸಿತ್ತು. ಸುಪ್ರೀಂ ಕೋರ್ಟ್ ಆದೇಶವು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ. ಯಾಕೆಂದರೆ ಕೇಂದ್ರ ಪಡೆಗಳ ನಿಯೋಜನೆಯನ್ನು ಮಮತಾ ಬ್ಯಾನರ್ಜಿ ಸರ್ಕಾರವು ಕಟುವಾಗಿ ವಿರೋಧಿಸಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ