ವೀಡಿಯೊ…| ಕಾರವಾರ: ಕೊಡಸಳ್ಳಿ ಡ್ಯಾಂ ರಸ್ತೆಯಲ್ಲಿ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕಾರವಾರ (Karwar) ತಾಲೂಕಿನ ಕದ್ರಾ ಬಳಿಯ ಬಾಳೆಮನೆ ಗ್ರಾಮದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತವಾಗಿದೆ.
ಕಾರವಾರ ತಾಲೂಕಿನ ಕದ್ರಾದಿಂದ ಬಾಳೆಮನಿ, ಸುಳಗೇರಿ ಮಾರ್ಗವಾಗಿ ಕೂಡಸಳ್ಳಿ ಅಣೆಕಟ್ಟಿಗೆ ಹಾದುಹೋಗುವ ರಸ್ತೆಯ ಮೇಲೆಯೇ ಭಾರಿ ಪ್ರಮಾನದಲ್ಲಿ ಗುಡ್ಡ ಕುಸಿತವಾಗಿದೆ. ಹೀಗಾಗಿ ಕದ್ರಾ ಭಾಗದ ಬಾಳೆಮನೆ, ಸುಳಗೇರಿ ಕೊಡಸಳ್ಳಿ ಸಂಪರ್ಕ ರಸ್ತೆ ಕಡಿತವಾಗಿದೆ.

ಅದೃಷ್ಟವಶಾತ್ ಬೆಳಗ್ಗೆ ರಸ್ತೆಯಲ್ಲಿ ಯಾವ ಸಂಚಾರ ಇಲ್ಲದಿರುವಾಗ ಗುಡ್ಡ ಕುಸಿದಿದೆ. ಬಾಳೆಮನೆ, ಜೊಯಿಡಾ ತಾಲೂಕಿನ ಸೂಳಗೇರಿ ಗ್ರಾಮದ ಜನರಿಗೆ ಈ ರಸ್ತೆ ಸಂಪರ್ಕಕ್ಕೆ ಆಸರೆಯಾಗಿದೆ. ಕೊಡಸಳ್ಳಿ ಅಣೆಕಟ್ಟೆ ನಿರ್ವಹಣೆ ಕೆಲಸಕ್ಕೆ ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿ) ಸಿಬ್ಬಂದಿ ತೆರಳುವುದು ಇದೇ ಮಾರ್ಗವಾಗಿದೆ. ಭೂಕುಸಿತ ಪ್ರದೇಶದಲ್ಲಿ ರಸ್ತೆ ಮೇಲೆ ಬಿದ್ದ ಮಣ್ಣನ್ನು ಸಂಜೆ ಒಳಗೆ ಸಂಚಾರ ವ್ಯವಸ್ಥೆ ಕಲ್ಪಿಸುವುದಾಗಿ ಜಿಲ್ಲಾಡಳಿತದ ಮೂಲಗಳು ಹೇಳಿವೆ.

ಪ್ರಮುಖ ಸುದ್ದಿ :-   ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್‌ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement