ದಾವಣಗೆರೆ: ರಂಜಾನ್ ಹಬ್ಬದ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶನಿವಾರ ಆನಗೋಡು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಆನಗೋಡು ಗ್ರಾಮದ ಈದ್ಗಾ ಮೈದಾನದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹೆಜ್ಜೇನುಗಳ ಗುಂಪು ದಾಳಿ ನಡೆಸಿದೆ. ಇದರಿಂದ ಪ್ರಾರ್ಥನೆಗೆ ಆಗಮಿಸಿದ್ದವರು ಭೀತಿಗೊಳಗಾಗಿ ಓಡಿದ್ದಾರೆ.
ಯುವಕರು ಮಕ್ಕಳು ಹೆಣ್ಣು ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ಕೈದು ಜನರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಎಎಸ್‌ಐ ನಾರಪ್ಪ ಸೇರಿದಂತೆ ಸಿಬ್ಬಂದಿಗೂ ಗಾಯಗಳಾಗಿವೆ.ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ನಿಮ್ಮ ಕಾಮೆಂಟ್ ಬರೆಯಿರಿ