ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥ

ಚಿಕ್ಕೋಡಿ : ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಗ್ರಾಮದ ಬೋರ್​ವೆಲ್ ಮೂಲಕ ನಲ್ಲಿಗೆ ನೀರು ಸರಬರಾಜು ಮಾಡಲಾಗುತ್ತದೆ. ನೀರು ಸರಬರಾಜು ಮಾಡುವ ಪೈಪ್​ ಒಡೆದು ಕೊಳಚೆ ನೀರು ಮಿಶ್ರಣವಾಗಿದೆ. ಈ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ, ಬೇಧಿಗೆ ತುತ್ತಾಗಿದ್ದಾರೆ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ 10ಕ್ಕೂ ಹೆಚ್ಚು ಜನರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಉಳಿದವರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲೇ ಚಿಕಿತ್ಸೆ ನೀಡಿದ್ದಾರೆ. ವೈದ್ಯಾಧಿಕಾರಿಗಳ ತಂಡ ಕಸನಾಳ ಗ್ರಾಮಕ್ಕೆ ಬಂದಿದೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement