ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಮುಂದಾಗಿದ್ದು, ಇದಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಇಂದು, ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೊಸದಾಗಿ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್​.ಕೆ. ಪಾಟೀಲ, ಫೈನಾನ್ಸ್ ಸಂಸ್ಥೆಗಳು ನೀಡುತ್ತಿರುವ ಕಿರುಕುಳಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದರು.

ಅಮಾನವೀಯವಾಗಿ ಮೈಕ್ರೋ ಪೈನಾನ್ಸ್ ಸಂಸ್ಥೆಗಳು ಸಾಲ ವಸೂಲಿ ಮಾಡುತ್ತಿವೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಮಸೂದೆ ತರಲು ತೀರ್ಮಾನಿಸಲಾಗಿದ್ದು, ಕೆಲವು ತಾಂತ್ರಿಕ ಅಂಶಗಳ ಬಗ್ಗೆ ಚರ್ಚಿಸಲಾಯಿತು ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ಜೊತೆಗಿನ ಸಭೆಯ ಬಳಿಕ ಕಾನೂನಾತ್ಮಕವಾಗಿ ಹೇಗೆ ಮಾಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಲಿದೆ. ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಆದರೆ ಕೆಲವು ಮೈನಸ್ ಆಗಬಹುದಾಗಿದೆ. ಹೀಗಾಗಿ ಕಾನೂನಾತ್ಮಕ ತೀರ್ಮಾನಕ್ಕೆ ಸಂಜೆ ಹಿರಿಯ ಸಚಿವರ ಸಭೆ ಕರೆಯಲಾಗಿದೆ ಎಂದು ಎಚ್.ಕೆ ಪಾಟೀಲ ತಿಳಿಸಿದರು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement