ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಡಿ ಖಾಲಿ ಇರುವ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್ ಮೀಸಲಿಡಲಾಗಿದೆ.
ನೇಮಕಾತಿ ಸಂಸ್ಥೆ- ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ
ಹುದ್ದೆ ಹೆಸರು- ಪಶುವೈದ್ಯಾಧಿಕಾರಿ
ಹುದ್ದೆಗಳು-400
ಪ್ರತಿ ಮಾಸಿಕ ವೇತನ- 52,640
ಹುದ್ದೆ-ಗುತ್ತಿಗೆ ಆಧಾರಿತ ಹುದ್ದೆ
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ಪಶುವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿ.ವಿ.ಎಸ್.ಸಿ. / ಬಿ.ವಿ.ಎಸ್.ಸಿ & ಎಎಚ್ ಪದವಿ ಪಡೆದಿರಬೇಕು. ದಿನಾಂಕ 24-06-2024 ರ ಒಳಗಾಗಿ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984ರ ಅಡಿಯಲ್ಲಿ ಕೆ.ವಿ.ಸಿ ನೊಂದಣಿ ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಂಪೂರ್ಣ ಮಾಹಿತಿಗಾಗಿ ಪಿಡಿಎಫ್ ನೋಡಲು VOcontractNotification ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.
ವಯೋಮತಿ: ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ಪ್ರವರ್ಗ 2 ಎ, 2 ಬಿ, ಪ್ರವರ್ಗ 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 38 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 40 ವರ್ಷ.
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ.
ಅರ್ಜಿ ಸಲ್ಲಿಕೆ ವಿಧಾನ : ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವೆಬ್ಸೈಟ್ https://ahvs.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸ್ವೀಕಾರ ಜೂನ್ 14ರಿಂದ ಆರಂಭವಾಗಿದ್ದು, ಜೂನ್ 24 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸ್ವೀಕಾರ ಆರಂಭದ ದಿನಾಂಕ: 14-06-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24-06-2024
ಷರತ್ತುಗಳು
ಗುತ್ತಿಗೆ ಆಧಾರದ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಕಾಯಂಗೊಳಿಸಲು ಅವಕಾಶ ಇರುವುದಿಲ್ಲ. ಗುತ್ತಿಗೆ ಆಧಾರದ ಮೇಲೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸವಾಗಿರಬೇಕು. ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಪಶುವೈದ್ಯಾಧಿಕಾರಿಗಳಿಗೆ ನಿಗದಿಪಡಿಸಿರುವ ಮಾಸಿಕ ವೇತನವನ್ನು ಹೊರತುಪಡಿಸಿ ಇತರೆ ಯಾವುದೇ ಭತ್ಯೆಗಳನ್ನು ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ