ಚಿತ್ರದುರ್ಗ ಮುರುಘಾಮಠಕ್ಕೆ ಉಸ್ತುವಾರಿ ಪೀಠಾಧ್ಯಕ್ಷರ ನೇಮಕ: ಕೋರ್ಟ್​ ಅನುಮತಿ ಪಡೆದು ಪ್ರಕಟ

ಚಿತ್ರದುರ್ಗ:  ಚಿತ್ರದುರ್ಗದ ಮುರುಘಾ ಮಠಕ್ಕೆ ಪ್ರಭಾರ ಉಸ್ತುವಾರಿ ಪೀಠಾಧ್ಯಕ್ಷರನ್ನು  ನೇಮಕ ಮಾಡಲಾಗಿದೆ. ಕಾನೂನು ಪ್ರಕ್ರಿಯೆ ಮೂಲಕ ಅಧಿಕೃತವಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ನೇಮಿಸಲಾಗಿದೆ.
ಈ ಬಗ್ಗೆ ಹೈಕೋರ್ಟ್ ಅನುಮತಿ ಪಡೆದು ಮುರುಘಾ ಮಠದ ಪೂಜಾ ಕೈಂಕರ್ಯ ಹಾಗೂ ಮಠದ ದೈನಂದಿನ ಚಟುವಟಿಕೆಯ ಉಸ್ತುವಾರಿಗೆ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ಮುರುಘಾ ಶರಣರು ನೇಮಕ ಮಾಡಿದ್ದಾರೆ. ಹೈಕೋರ್ಟ್ ಅನುಮತಿ ಪಡೆದು ಕಾರಾಗೃಹದಲ್ಲಿ ಈ ಪ್ರಕ್ರಿಯೆಯನ್ನು ಶನಿವಾರ ಪೂರ್ಣಗೊಳಿಸಲಾಗಿದೆ. ಬಸವಪ್ರಭು ಶ್ರೀಗಳ ನೇಮಕ ಮಾಡಿದ ಕುರಿತು ಮುರುಘಾಮಠ ಇಂದು, ಭಾನುವಾರ(ಅಕ್ಟೋಬರ್ 16) ಅಧಿಕೃತ ಪ್ರಕಟಣೆ ನೀಡಿದೆ.

ಸದ್ಯದ ಪರಿಸ್ಥಿತಿಯಲ್ಲಿ ಧಾರ್ಮಿಕ, ಸೇವಾ, ಪೂಜಾ ಕಾರ್ಯಗಳು ಮಠದ ಪರಂಪರೆ ಮುಂದುವರೆಸಿಕೊಂಡು ಹೋಗಲು ಪ್ರಕಟಣೆಯಲ್ಲಿ ತಿಳಿಸಿದೆ. ಈ ನೇಮಕ ತಾತ್ಕಾಲಿಕ ಅವಧಿಗೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ. ಸಲಹಾ ಸಮಿತಿ, ಆಡಳಿತ ಮಂಡಳಿ ಸಹಮತ ನೀಡಿದೆ ಎನ್ನಲಾಗಿದೆ.
ಮುರುಘಾಮಠದ ಪೂಜಾ ಕೈಂಕರ್ಯದ ಉಸ್ತುವಾರಿಯಾಗಿ ನೇಮಕಗೊಂಡಿರುವ ಬಸವಪ್ರಭು ಶ್ರೀಗಳು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪೂಜೆ, ದಾಸೋಹ,‌ ಮಠದ ಕೆಲಸ ನೋಡಿಕೊಳ್ಳಲು ಶಿವಮೂರ್ತಿ ಮುರುಘಾ ಶರಣರಿಂದ ಆದೇಶ ಸಿಕ್ಕಿದೆ. ಮುರುಘಾ ಶ್ರೀಗಳ ಆಶೀರ್ವಾದ, ಮಾರ್ಗದರ್ಶನದಲ್ಲಿ ಎಲ್ಲ ಮಠದ ಶ್ರೀಗಳು ಹಾಗೂ ಭಕ್ತರ ಆಶಯದಂತೆ ಸೇವೆ ಮಾಡುತ್ತೇನೆ. ಭಕ್ತರು ಸಹಕರಿಸವೇಕೆಂದು ಮನವಿ ಮಾಡಿದರು.

ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

 

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement