ನಿರಂತರ ಮಳೆಗೆ ಮನೆಗೋಡೆ ಕುಸಿದು 1 ವರ್ಷದ ಹೆಣ್ಣು ಮಗು ಸಾವು

ದಾವಣಗೆರೆ: ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಗೋಡೆ ಕುಸಿದು ಬಿದ್ದು ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮಗುವನ್ನು ಸ್ಫೂರ್ತಿ ಎಂದು ಗುರುತಿಸಲಾಗಿದೆ. ಸ್ಫೂರ್ತಿ ತಂದೆ ಕೆಂಚಪ್ಪ ಅವರಿಗೆ ಗಾಯವಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಿರಂತರ ಮಳೆಯಿಂದಾಗಿ ಮನೆಯ ಗೋಡೆ ಶಿಥಿಲಗೊಂಡಿತ್ತು. ಮೂರು‌ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಮನೆ ಸಂಪೂರ್ಣವಾಗಿ ಸಂಪೂರ್ಣವಾಗಿ ನೆನೆದಿದ್ದು ಸೋಮವಾರ (ಜುಲೈ 24) ರಾತ್ರಿ ವೇಳೆ ಮಲಗಿದ್ದ ಸಂದರ್ಭದಲ್ಲಿ ಮನೆಗೋಡೆ ಕುಸಿದಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ ಹಾಗೂ ಪೋಲಿಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಹಾವೇರಿ ತಾಲೂಕಿನ ಮಾಳಪುರ ಗ್ರಾಮದಲ್ಲಿ ಇಂಥದ್ದೇ ಘಟನೆ ನಡೆದಿದೆ ಎಂದು ವರದಿಯಾಗಿದೆ. ನಿರಂತರ ಮಳೆ ಕಾರಣದಿಂದ ಎರಡು ದಿನದ ಹಿಂದೆ ಮನೆ ಕುಸಿದು ಮೂರು ವರ್ಷದ ಪುಟ್ಟ ಮಗು ಗಾಯಗೊಂಡಿತ್ತು. ನಂತರ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ ಎಂದು ವರದಿಯಾಗಿದೆ

ಪ್ರಮುಖ ಸುದ್ದಿ :-   ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement