ಭಾರತ vs ಆಸ್ಟ್ರೇಲಿಯಾ ಏಕದಿನ ಕ್ರಿಕೆಟ್‌ : ಮೊದಲ ಎರಡು ಪಂದ್ಯಕ್ಕೆ ಕೆ.ಎಲ್‌. ರಾಹುಲ್ ನಾಯಕ, ಆರ್ ಅಶ್ವಿನ್ ಪೂರ್ಣ ಸರಣಿಗೆ ಆಯ್ಕೆ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ಎರಡು ಸೆಟ್ ತಂಡಗಳನ್ನು ಆಯ್ಕೆ ಮಾಡಿದೆ. ಮೊದಲ ಎರಡು ಏಕದಿನದ ಪಂದ್ಯಗಳಿಗೆ ಕೆ.ಎಲ್. ರಾಹುಲ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಆರ್ ಅಶ್ವಿನ್ 2022 ರ ನಂತರ ಮೊದಲ ಬಾರಿಗೆ ಏಕದಿನದ ಪಂದ್ಯಾವಳಿಯ ತಂಡಕ್ಕೆ ಮರಳಿದ್ದಾರೆ ಮತ್ತು ಸಂಪೂರ್ಣ ಸರಣಿಗೆ ಅವರು ಆಯ್ಕೆಯಾಗಿದ್ದಾರೆ.
ಅಂತಿಮ ಏಕದಿನ ಪಂದ್ಯಕ್ಕೆ ಭಾರತವು ತನ್ನ ವಿಶ್ವಕಪ್ ತಂಡವನ್ನು ಬಳಸಿಕೊಳ್ಳಲಿದ್ದು, ರೋಹಿತ್ ಶರ್ಮಾ ನಾಯಕನಾಗಿ ತಂಡಕ್ಕೆ ಮರಳಲಿದ್ದಾರೆ.
ಅಕ್ಸರ್ ಪಟೇಲ್ ಗಾಯದ ನಂತರ ಶ್ರೀಲಂಕಾ ವಿರುದ್ಧ ಏಷ್ಯಾಕಪ್ ಫೈನಲ್‌ಗೆ ಆಯ್ಕೆಯಾಗಿದ್ದ ವಾಷಿಂಗ್ಟನ್ ಸುಂದರ್ ಮೊದಲ ಎರಡು ಪಂದ್ಯಗಳಿಗೆ ತಂಡದಲ್ಲಿ ಇರುತ್ತಾರೆ. ಮೊದಲೆರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮುಂತಾದವರು ವಿಶ್ರಾಂತಿ ಪಡೆದಿರುವ ಕಾರಣ ರವೀಂದ್ರ ಜಡೇಜಾ ಅವರು ಉಪನಾಯಕರಾಗಿದ್ದಾರೆ.

ಇಶಾನ್ ಕಿಶನ್ ಪ್ರಚಂಡ ಫಾರ್ಮ್‌ನಲ್ಲಿದ್ದಾರೆ ಮತ್ತು ಅವರು ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಎಲ್ಲಾ ಮೂರು ಪಂದ್ಯಗಳಿಗೂ ಆಯ್ಕೆಯಾಗಿದ್ದಾರೆ. 2023ರ ಏಷ್ಯಾಕಪ್‌ನಲ್ಲಿ ಸರಣಿಶ್ರೇಷ್ಠ ಆಟಗಾರರಾಗಿದ್ದ ಕುಲದೀಪ್ ಯಾದವ್‌ಗೆ ಮೊದಲ ಎರಡು ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ.
ಏಷ್ಯಾಕಪ್ ಫೈನಲ್‌ನಲ್ಲಿ ಶ್ರೀಲಂಕಾವನ್ನು 10 ವಿಕೆಟ್‌ಗಳಿಂದ ಸೋಲಿಸಿದ ಭಾರತವು ಆತ್ಮವಿಶ್ವಾಸದಲ್ಲಿದೆ. ಎದುರಾಳಿ ತಂಡವನ್ನು ಆರು ವಿಕೆಟುಗಳನ್ನು ಕಬಳಿಸಿದ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಭಾರತವು ಆತಿಥೇಯರನ್ನು 50 ರನ್‌ಗಳಿಗೆ ಆಲೌಟ್ ಮಾಡಿದ ನಂತರ 273 ಎಸೆತಗಳು ಬಾಕಿ ಇರುವಂತೆಯೇ ಗುರಿ ತಲುಪಿತು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಏಕದಿನ ಪಂದ್ಯಗಳು ಕ್ರಮವಾಗಿ ಮೊಹಾಲಿ, ಇಂದೋರ್ ಮತ್ತು ರಾಜ್‌ಕೋಟ್‌ನಲ್ಲಿ ಕ್ರಮವಾಗಿ ಸೆಪ್ಟೆಂಬರ್ 22, 24 ಮತ್ತು 27 ರಂದು ನಡೆಯಲಿವೆ.

ಪ್ರಮುಖ ಸುದ್ದಿ :-   ಮಧುಮೇಹ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ 41 ಔಷಧಗಳ ಬೆಲೆ ಕಡಿಮೆ ಮಾಡಿದ ಸರ್ಕಾರ

ಮೊದಲ ಎರಡು ಏಕದಿನ ಪಂದ್ಯಗಳಿಗೆ ಭಾರತ ತಂಡ:
ಕೆ.ಎಲ್. ರಾಹುಲ್ (ನಾಯಕ ಹಾಗೂ ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ ಯಾದವ್, ತಿಲಕ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ, ವಾಷಿಂಗ್ಟನ್ ಸುಂದರ್, ಆರ್.ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
3ನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೆ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ ಯಾದವ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ ಯಾದವ್, ಆರ್.ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement