ದಾಂಡೇಲಿ: ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಕೂಡ ಉಚಿತ ಯೋಜನೆಗಳು ಅಪಾಯಕಾರಿ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್ವಿ ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಹಾಗೂ ಇದು ತನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು, ಸರ್ಕಾರವನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.
ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಹಿರಿಯ ರಾಜಕಾರಣಿಯಾದ ಆರ್.ವಿ .ದೇಶಪಾಂಡೆ ಈಗ ತಮ್ಮದೇ ಸರ್ಕಾರದ ಉಚಿತ ಯೋಜನೆಗಳ ಬಗ್ಗೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ