ಒಳಮೀಸಲಾತಿ : ನ್ಯಾ. ನಾಗಮೋಹನ ದಾಸ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಅವರು ಮಾಹಿತಿ ನೀಡಿದರು.
ನಾಗಮೋಹನ ದಾಸ ಸಮಿತಿಯು ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ ೩೦ ರಿಂದ ೪೦ ದಿವಸಗಳಲ್ಲಿ ಹೊಸ ಸಮೀಕ್ಷೆ ನಡೆಸಬಹುದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೊಸ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿ ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು. ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿ ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ ಎಂದು ಅವರು ತಿಳಿಸಿದರು.

ಪ್ರಮುಖ ಸುದ್ದಿ :-   ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ವಿದ್ಯುತ್‌ ಕಂಬ

ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿರುವ ಬಗ್ಗೆ ಸಚಿವರು ತಿಳಿಸಿದ್ದಾರೆ.
ನಾಗಮೋಹನ ದಾಸ ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಗುರುವಾರ ಅಂಗೀಕರಿಸಿದೆ. ಒಳಮೀಸಲಾತಿ ವರ್ಗೀಕರಣವನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ ದಾಸ ಸಮಿತಿಗೆ ವಹಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಸಮೀಕ್ಷಾ ಕಾರ್ಯವನ್ನು ೬೦ ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ ಎಂದು ಸಚಿವರು ತಿಳಿಸಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement