ಫಿರೋಜಾಬಾದ್: ಶಂಕಿತ ಡೆಂಗಿ ಜ್ವರಕ್ಕೆ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆ

ಲಖನೌ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗಿ ಜ್ವರದಿಂದಾಗಿ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.ಕಳೆದ 24 ತಾಸಿನಲ್ಲಿ ಮತ್ತೆ ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಸಂಬಂಧ ಜಿಲ್ಲಾಧಿಕಾರಿ ಫಿರೋಜಾಬಾದ್‌ನ ಮೂವರು ವೈದ್ಯರನ್ನು ಅಮಾನತುಗೊಳಿಸಿದ್ದಾರೆ.
ಫಿರೋಜಾಬಾದ್‌ನಲ್ಲಿ ಆಗಸ್ಟ್ 18ರಿಂದಲೇ ಶಂಕಿತ ಡೆಂಗಿ ಹಾಗೂ ವೈರಲ್ ಜ್ವರಕ್ಕೆ ಹಲವರು ಮೃತಪಟ್ಟಿದ್ದಾರೆ. ಇದರಿಂದಾಗಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ.
ಸ್ಥಳಕ್ಕೆ ಭೇಟಿ ಕೊಟ್ಟಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಂಡವು ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. 11 ಸದಸ್ಯರ ಐಪಿಎಂಆರ್ ತಂಡ, ಉತ್ತರ ಪ್ರದೇಶದ ಆರೋಗ್ಯ ಇಲಾಖೆ ಮತ್ತು ಮತ್ತೊಂದು 18 ಸದಸ್ಯರ ವೈದ್ಯಕೀಯ ತಂಡವು ಸೇರಿ ಜ್ವರದ ಹಿಂದಿನ ನಿಖರ ಕಾರಣಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿಕೊಂಡಿದೆ.
ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿರುವ ವೈದ್ಯಕೀಯ ತಂಡವು, ಜ್ವರದಿಂದ ಬಳಲುತ್ತಿರುವ ರೋಗಿಗಳಿಂದ ಮಾಹಿತಿ ಹಾಗೂ ಮಾದರಿಯನ್ನು ಕಲೆ ಹಾಕಿದೆ.
ಶುಚಿತ್ವವನ್ನು ಕಾಪಾಡಲು ಹಾಗೂ ಸೊಳ್ಳೆಗಳ ಹರಡುವಿಕೆ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಫಿರೋಜಾಬಾದ್‌ಗೆ ಹತ್ತಿರದ ಮಥುರಾ, ಇಟಾ ಮತ್ತು ಮೈನ್‌ಪುರಿ ಜಿಲ್ಲೆಗಳಲ್ಲೂ ಪ್ರಕರಣಗಳು ವರದಿಯಾಗಿವೆ. ಇದು ಕಳವಳಕ್ಕೆ ಕಾರಣವಾಗಿದೆ.

ಪ್ರಮುಖ ಸುದ್ದಿ :-   ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement