ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ : 2 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 4 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ಬೆಂಗಳೂರು : ಕರ್ನಾಟಕದ ಎರಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್​, ಕಲಬುರಗಿ, ಬೆಳಗಾವಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ರಾಯಚೂರು ಜಿಲ್ಲೆಗಳಿಗೆ ಸೆಪ್ಟೆಂಬರ್‌ ೧ರಂದು ಯೆಲ್ಲೋ ಆರೆಂಜ್‌ ಅಲರ್ಟ್‌ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಗಾಳಿಯ ವೇಗವೂ ೩೫-೪೫ ಕಿಮೀ ವರೆಗೆ ಇರಲಿದೆ ಎಂದು ತಿಳಿಸಲಾಗಿದೆ. ಹೀಗಾಗಿ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement