
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಹಾಗೂ ವೀಡಿಯೋ ಕಾಲ್ ಸಂಭಾಷಣೆ ಮಾಡಿರುವ ಫೋಟೋಗಳು, ವಿಡಿಯೋಗಳು ವೈರಲ್ ಆದ ನಂತರ ಎಚ್ಚೆತ್ತುಕೊಂಡ ಗೃಹ ಇಲಾಖೆ 7 ಜೈಲು ಸಿಬ್ಬಂದಿಯನ್ನು ಅಮಾನತು ಮಾಡಿದೆ.
ಬೆಂಗಳೂರಿನಲ್ಲಿ ಇದೇ ವಿಚಾರವಾಗಿ ಸೋಮವಾರ ಹೇಳಿಕೆ ನೀಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ಈ ಸಂಬಂಧ ಸದ್ಯ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆಯಲ್ಲಿ ಜೈಲಾಧಿಕಾರಿಗಳು ಭಾಗಿಯಾದರೆ ಅವರನ್ನು ಅಮಾನತು ಮಾಡಲಾಗುವುದು. ಇದರಲ್ಲಿ ಯಾವುದೇ ಮುಲಾಜು ಇಲ್ಲ ಎಂದು ತಿಳಿಸಿದರು.
ನಾನು ವರದಿಯನ್ನು ಕೇಳಿದ್ದೇನೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದ ಎಲ್ಲಾ ಜೈಲುಗಳಲ್ಲಿ ಸಿಸಿ ಟಿವಿ, ಜಾಮರ್ ಅಳವಡಿಸಲಾಗಿದೆ. ಹೀಗಿದ್ದರೂ ಇಂತಹ ಘಟನೆಗಳು ನಡೆಯುತ್ತವೆ ಎಂದಾದರೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕಾಗಿದೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಂಡು, ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಅವರು ತಿಳಿಸಿದರು.



ನಿಮ್ಮ ಕಾಮೆಂಟ್ ಬರೆಯಿರಿ