ಮುಂದುವರಿದ ಮುಷ್ಕರ: ಸಾರಿಗೆ ಇಲಾಖೆ 334 ನೌಕರರ ವಜಾ

ಬೆಂಗಳೂರು: ನೋಟಿಸ್ ನೀಡಿದರೂ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯಿಂದ ಈವರೆಗೆ 334 ನೌಕರರನ್ನು ವಜಾಗೊಳಿಸಿ ಆದೇಶಿಸಲಾಗಿದೆ.
ಶುಕ್ರವಾರ 118 ನೌಕರರನ್ನು ವಜಾಗೊಳಿಸಲಾಗಿತ್ತು. 216 ನೌಕರರನ್ನು ಶನಿವಾರ ವಜಾಗೊಳಿಸಿ ಆದೇಶ ಮಾಡಲಾಗಿದ್ದು, ಒಟ್ಟಾರೆ 334 ನೌಕರರನ್ನು ಕೆಲಸದಿಂದ ವಜಾ ಮಾಡಲಾಗಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಸೂಚನೆ ನೀಡಿದರೂ ಕೂಡ ಕ್ಯಾರೆ ಎನ್ನದೆ ಮುಷ್ಕರವನ್ನು ಮುಂದುವರಿಸಿದ್ದಾರೆ. ಹೀಗಾಗಿ ಸರ್ಕಾರ ಮುಷ್ಕರವನ್ನು ನಿಷೇಧಿಸಿ ಆದೇಶ ಮಾಡಿ ಕಾನೂನು ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.
ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ನೋಟಿಸ್ ನೀಡಲಾಗಿದೆ. ಸಂಬಳ ಕಡಿತದ ಎಚ್ಚರಿಕೆ ರವಾನಿಸಲಾಗಿದೆ. ತರಬೇತಿ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕೆಂದು ನೋಟಿಸ್ ನೀಡಿದರೂ ಕೂಡ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಸಿಬ್ಬಂದಿಯನ್ನು ಇಲಾಖೆ ವಜಾಗೊಳಿಸುತ್ತಿದ್ದು, ಈವರೆಗೆ 334 ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಇದರಲ್ಲಿ ತರಬೇತಿಯಲ್ಲಿರುವ 60, ಪೂರ್ವ ತರಬೇತಿಯಲ್ಲಿರುವ 58 ಸೇರಿದಂತೆ ಒಟ್ಟು 334 ನೌಕರರನ್ನು ವಜಾ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement