ಬೆಂಗಳೂರು : ಮೂರು ಕಡೆ ದಾಳಿ, 55.88 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶಕ್ಕೆ

ಬೆಂಗಳೂರು/ ಮುಂಬೈ : ಮಹಾರಾಷ್ಟ್ರದ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ, ಅಂತಾರಾಜ್ಯ ಎಂಡಿ (MD) ಡ್ರಗ್ಸ್ ಉತ್ಪಾದನಾ ಜಾಲವನ್ನು ಧ್ವಂಸಗೊಳಿಸಿದೆ ಎಂದು ವರದಿಯಾಗಿದೆ.
ಬೆಂಗಳೂರು ನಗರದ ಮೂರು ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಘಟಕಗಳ ಮೇಲೆ ದಾಳಿ ಮಾಡಿರುವ ಪೊಲೀಸರು, ಸುಮಾರು 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಹುಡುಕಾಟ ಮುಂದುವರಿದಿದೆ.

ದಾಳಿ ವೇಳೆ 4.1 ಕೆಜಿ ಘನ ರೂಪದ ಎಂಡಿ ಡ್ರಗ್ಸ್‌ ಮತ್ತು 17 ಕೆಜಿ ದ್ರವ ರೂಪದ ಎಂಡಿ ಡ್ರಗ್ಸ್‌ ಸೇರಿದಂತೆ ಒಟ್ಟು 21.4 ಕೆಜಿ ಡ್ರಗ್ಸ್, ಯಂತ್ರೋಪಕರಣಗಳು ಮತ್ತು ರಾಸಾಯನಿಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನ ಸ್ಪಂದನಾ ಲೇಔಟ್ ಕಾಲೋನಿ, ಎನ್.ಜಿ. ಗೊಲ್ಲಹಳ್ಳಿಯ ‘ಆರ್‌ಜೆ ಇವೆಂಟ್’ ಫ್ಯಾಕ್ಟರಿ ಮತ್ತು ಯರಪ್ಪನಹಳ್ಳಿ-ಕಣ್ಣೂರು ಬೆಲ್ಟ್‌ನಲ್ಲಿರುವ ವಸತಿ ಮನೆಯಲ್ಲಿ ಈ ಅಕ್ರಮ ದಂಧೆ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಕಳೆದ ಡಿಸೆಂಬರ್ 21ರಂದು ಮುಂಬೈ-ಪುಣೆ ಹೆದ್ದಾರಿಯಲ್ಲಿ ಅಬ್ದುಲ್ ಖಾದರ್ ರಶೀದ್ ಶೇಖ್ ಎಂಬಾತನನ್ನು 1.48 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಮೇತ ಬಂಧಿಸಲಾಗಿತ್ತು. ಆತನ ವಿಚಾರಣೆಯ ವೇಳೆ ಬೆಳಿಕಿಗೆ ಬಂಧ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಇಲ್ಲಿ ತಯಾರಾಗುತ್ತಿದ್ದ ಮಾದಕ ದ್ರವ್ಯಗಳನ್ನು ದೇಶದ ವಿವಿಧ ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಈ ಅಕ್ರಮ ದಂಧೆಯಿಂದ ಬಂದ ಹಣವನ್ನು ಬಳಸಿಕೊಂಡು ಬೆಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಖರೀದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇಬ್ಬರು ಪ್ರಮುಖ ಶಂಕಿತರು ತಲೆಮರೆಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement