ಉಕ್ರೇನಿನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಉಕ್ರೇನ್ ನಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಗುರುವಾರ ದೂರವಾಣಿ ಮೂಲಕ ಮಾತನಾಡಿದ್ದಾರೆ.
ಈ ಸಂದರ್ಭದಲ್ಲಿ ತಮ್ಮ ಪರಿಸ್ಥಿತಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಖಾರ್ಕೀವ್ ನಿಂದ 30 ಕಿ‌ಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ. ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ’ ಎಂದು ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜಿತೆ ರಾಜ್ಯ ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ಎಲ್ಲ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಸುಮಾರು 200 ಮಂದಿ ರಾಜ್ಯದ ವಿದ್ಯಾರ್ಥಿಗಳು ಖಾರ್ಕೀವ್‌ನಲ್ಲಿ ಇದ್ದಾರೆ.
ಗಗನಗೌಡ ಎಂಬ ಬೆಂಗಳೂರಿನ ಮೂಲದ ವಿದ್ಯಾರ್ಥಿ ಸೇರಿದಂತೆ ಇತರೆ ವಿದ್ಯಾರ್ಥಿಗಳ ಜತೆ ಸಿಎಂ ಮಾತನಾಡಿದರು.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ. ಕೆ ಗೋಪಾಲಯ್ಯ ಉಪಸ್ಥಿತರಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement