ಅಕ್ರಮ ಆನ್‌ಲೈನ್ ಬೆಟ್ಟಿಂಗ್ : ಶಾಸಕ ವೀರೇಂದ್ರ ಪಪ್ಪಿ, ಸಹಚರರ 177 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು : ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಅವರ ಸಹಚರರನ್ನು ಒಳಗೊಂಡ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ED)ವು 177.3 ಕೋಟಿ (ಅಂದಾಜು)ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
ಈ ಮೂಲಕ ಇದುವರೆಗೂ 320 ಕೋಟಿ ರೂ. ಆಸ್ತಿ ವಶಪಡಿಸಿಕೊಂಡಂತಾಗಿದೆ. ಮುಟ್ಟುಗೋಲು ಹಾಕಿಕೊಳ್ಳಲಾದ ಆಸ್ತಿಗಳಲ್ಲಿ ಕೃಷಿ ಭೂಮಿ ಮತ್ತು ವಸತಿ ನಿವೇಶನಗಳು ಸೇರಿದಂತೆ ಸ್ಥಿರ ಆಸ್ತಿಗಳು ಮತ್ತು ಇತರ ಚರ ಆಸ್ತಿಗಳು ಸೇರಿವೆ. ಆದರೆ ಈ ಆಸ್ತಿಗಳು ಯಾರಿಗೆ ಸೇರಿವೆ ಎಂಬುದನ್ನು ಅದು ನಿರ್ದಿಷ್ಟಪಡಿಸಿಲ್ಲ.

ಕರ್ನಾಟಕದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ವೀರೇಂದ್ರ ಪಪ್ಪಿಯನ್ನು 2025ರ ಆಗಸ್ಟ್ ನಲ್ಲಿ ಸಿಕ್ಕಿಂನಲ್ಲಿ ಇಡಿ ಬಂಧಿಸಿತ್ತು. ಸದ್ಯ ಪಪ್ಪಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ ಇಡಿ ಅವರನ್ನು ಪ್ರಕರಣದಲ್ಲಿ ‘ಪ್ರಮುಖ ಆರೋಪಿ’ ಎಂದು ಕರೆದಿದೆ. ವೀರೇಂದ್ರ ಮತ್ತು ಅವರ ಸಹಚರರು ರಾಷ್ಟ್ರವ್ಯಾಪಿ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಜಾಲದ ಹಿಂದಿನ ಮಾಸ್ಟರ್‌ಮೈಂಡ್‌ಗಳು ಎಂಬುದು ತನಿಖೆಯಲ್ಲಿ ಕಂಡುಬಂದಿದೆ ಎಂದು ಇ.ಡಿ. ಆರೋಪಿಸಿದೆ.

ಪ್ರಮುಖ ಸುದ್ದಿ :-   ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement