ಪಿಎಂಒ ಅಧಿಕಾರಿ ಎಂದು ಹೇಳಿ ಚಾಮರಾಜ ನಗರ ಜಿಲ್ಲಾಧಿಕಾರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ : ದೂರು ದಾಖಲು

ಚಾಮರಾಜನಗರ: ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ, ತಾನು ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿ ಎಂದು ಸುಳ್ಳು ಹೇಳಿ ಬಿಳಿಗಿರಿರಂಗನ ಬೆಟ್ಟ ವೀಕ್ಷಣೆಗೆ ವ್ಯವಸ್ಥೆೆಗೆ ಮಾಡುವಂತೆ ತಿಳಿಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಜೂನ್‌ 27 ರಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ತಾನು ಗುಜರಾತ್ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ. ಪ್ರಸ್ತುತ ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡುತ್ತಿದ್ದು, ದೇವಾಲಯ ಭೇಟಿ, ದೊಡ್ಡಸಂಪಿಗೆ ಮರ ವೀಕ್ಷಣೆ ಮತ್ತು ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ್ದರು.

ಹೆಸರು ವಿವರ ನೀಡುವಂತೆ ಜಿಲ್ಲಾಧಿಕಾರಿ ಕೇಳಿದಾಗ ಗೌಪ್ಯತೆಯ ಕಾರಣ ಹೆಸರು ಹೇಳಲು ಸಾಧ್ಯವಿಲ್ಲ ಎಂದು ಅಪರಿಚಿತ ವ್ಯಕ್ತಿ ಎಂದು ತಿಳಿಸಿದ್ದ.
ಈ ಬಗ್ಗೆ ಅನುಮಾನಗೊಂಡ ಜಿಲ್ಲಾಧಿಕಾರಿ ಸೋಮಲ್‌ ಕರೆ ಮಾಡಿದಾತನ ಮೊಬೈಲ್ ಸಂಖ್ಯೆ ಬಗ್ಗೆ ವಿವರಗಳನ್ನು ಕಲೆ ಹಾಕಿದಾಗ ಆ ವ್ಯಕ್ತಿ ನಕಲಿ ಅಧಿಕಾರಿ ಎಂಬುದು ಗೊತ್ತಾಗಿದೆ. ಈತನ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಪಟ್ಟಣ ಠಾಣೆಯಲ್ಲಿ ಈ ಸಂಬಂಧ ವಂಚನೆ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement