ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬ್ಯಾಂಕ್‌ ಮುಚ್ತಾರೆ:ಮಮತಾ ವಾಗ್ದಾಳಿ

ಕೊಲ್ಕತ್ತಾ : ಬಿಜೆಪಿ ಬಂದರೆ ಅದು ಜನರ ಹಕ್ಕುಗಳು ಕೊನೆಯಾಗಲಿದೆ, ರಾಜ್ಯದಲ್ಲಿರುವ ಎಲ್ಲ ಬ್ಯಾಂಕ್‌ಗಲೂ ಮುಚ್ಚಲಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮಂಗಳವಾರ ಬಂಗೂರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಒಂದು ವೇಳೆ ಬಿಜೆಪಿ ಆಯ್ಕೆಯಾದರೆ, ರಾಜ್ಯದ ಎಲ್ಲ ಬ್ಯಾಂಕ್ ಗಳನ್ನು ಮುಚ್ಚಲಾಗುವುದು, ನಿಮ್ಮ ಎಲ್ಲ ಹಕ್ಕುಗಳನ್ನು ನೀವು ಕಳೆದುಕೊಳ್ಳುತ್ತೀರಿ ಎಂದು ಎಚ್ಚರಿಸಿದರು.
ಕೇಂದ್ರ ಸಚಿವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಕೋಲ್ಕತ್ತಾದಲ್ಲಿ ಕೇಂದ್ರ ಸಚಿವರು ನಾಚಿಕೆಯಿಲ್ಲದೆ ಕುಳಿತಿರುತ್ತಾರೆ. ಅವರು ಕೋವಿಡ್ ಬಿಕ್ಕಟ್ಟು ಅಥವಾ ಆಂಫಾನ್ ಚಂಡಮಾರುತದ ಸಮಯದಲ್ಲಿ ಇಲ್ಲಿಗೆ ಬರಲಿಲ್ಲ ಈಗ ಬರುತಾರೆ ಎಂದು ಲೇವಡಿ ಮಾಡಿದರು.
ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯಕ್ಕೆ ನೆರವು ನೀಡಿಲ್ಲ ಎಂದು ಹೇಳಿದ್ದಾರೆ. ಮೋದಿ ಅವರು ದೇಶಾದ್ಯಂತ ಎಲ್ಲ ಕಾರ್ಖಾನೆಗಳನ್ನು ಮುಚ್ಚಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಸರ್ಕಾರ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇಜ್ರಿವಾಲಗೆ ದೆಹಲಿ ಹೈಕೋರ್ಟ್‌ ನಿಂದ ಸಿಗದ ಜಾಮೀನು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement