ಎರಡು ಗುಂಪುಗಳ ನಡುವೆ ಘರ್ಷಣೆ, ಚಾಕು ಇರಿತ : ನಿಷೇಧಾಜ್ಞೆ ಜಾರಿ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ಸಂಭವಿಸಿದ್ದು, ಚೂರಿಯಿಂದ ಇರಿಯಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಅರುಣ ಹಾಗೂ ಲಕ್ಷ್ಮಣ ಎಂಬವರಿಗೆ ಚೂರಿಯಿಂದ ಇರಿಯಲಾಗಿದೆ ಎಂದು ಹೇಳಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮನೂರಿ ಎಂಬವರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಮಾರುಕಟ್ಟೆಯಲ್ಲಿ ತರಕಾರಿ ಚೆಲ್ಲಿದ್ದಲ್ಲದೆ ಎರಡು ತಳ್ಳುಗಾಡಿಗೆ ಬೆಂಕಿ ಹಚ್ಚಲಾಗಿದೆ. ಅಲ್ಲದೆ ಐದು ಬೈಕ್​ಗಳು ಜಖಂಗೊಂಡಿವೆ. ಮೊದಲು ಬಸ್‌ ನಿಲ್ದಾಣಕ್ಕೆ ಸೀಮಿತವಾಗಿದ್ದ ಘರ್ಷಣೆ ಈಗ ಕೆರೂರು ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನತೆಯಿಂದ ಕೂಡಿದೆ. ಪೊಲೀಸರು ಈಗ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬಿಗಿ ಬಂದೋಬಸ್ತ್​​ಗೆ ಏರ್ಪಾಡು ಮಾಡಲಾಗಿದೆ. ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜುಲೈ 8ರ ವರೆಗೂ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement