ಲೈಂಗಿಕ ದೌರ್ಜನ್ಯದ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಜಾಮೀನು ಮಂಜೂರು

ಬೆಂಗಳೂರು : ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ ಜಾಮೀನು ನೀಡಿ ಆದೇಶಿಸಿದೆ. ಸಾಕ್ಷ್ಯಗಳ ನಾಶ ಮಾಡಬಾರದು, ನ್ಯಾಯಾಲಯದ ವ್ಯಾಪ್ತಿಯಿಂದ ಹೊರ ಹೋಗಬಾರದು ಮತ್ತು ಇಬ್ಬರು ಶ್ಯೂರಿಟಿ ನೀಡಬೇಕು ಎಂಬುದಾಗಿ ನ್ಯಾಯಪೀಠ ಷರತ್ತು ವಿಧಿಸಿ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಜಾಮೀನು ಕೋರಿ ದೇವರಾಜೇಗೌಡ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಜಿ. ಉಮಾ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ ಜಾಮೀನು ಮಂಜೂರು ಮಾಡಿದೆ.

ದೇವರಾಜೇಗೌಡ ಪರ ವಾದ ಮಂಡಿಸಿದ ಅರುಣ ಶ್ಯಾಮ ಅವರು, 2023 ಡಿಸೆಂಬರ್ 29 ರಂದು ಅತ್ಯಾಚಾರ ಪ್ರಕರಣ ನಡೆದಿದೆ ಎಂದು ಆರೋಪಿಸಿ ಏಪ್ರಿಲ್ 1 ರಂದು ಸಂತ್ರಸ್ತೆ ದೂರು ನೀಡಿದ್ದಾರೆ. ಇದಕ್ಕೂ ಮೊದಲು ಅರ್ಜಿದಾರರದ ದೇವರಾಜೇ ಗೌಡ ಅವರು ದೂರು ದಾಖಲಿಸಿರುವ ಮಹಿಳೆಯ ವಿರುದ್ಧ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿಗೆ ಪ್ರತಿಯಾಗಿ ಅರ್ಜಿದಾರರ ವಿರುದ್ಧ ದೂರು ದಾಖಲಿಸಲಾಗಿದೆ. ಇದೊಂದು ರಾಜಕೀಯ ದುರುದ್ದೇಶದ ದೂರು. ಆದರೆ ಅತ್ಯಾಚಾರ ಬಗ್ಗೆ ಆಗ ಯಾವುದೇ ಚಕಾರ ಇಲ್ಲ. ಆ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಘಟನೆಯ ಬಳಿಕ 90 ದಿನದ ವಿಳಂಬವಾಗಿ 2023ರ ಡಿಸೆಂಬರ್ 29ರಂದು ಅತ್ಯಾಚಾರವಾಗಿದೆ ಎಂದು ಆರೂಪಿಸಿ 2024ರ ಏಪ್ರಿಲ್ 1 ಎಂದು ದೂರು ದಾಖಲಿಸಿದ್ದು ಅತ್ಯಾಚಾರದ ದೂರು ನೀಡಿದ್ದಾರೆ ಎಂದು ವಾದಿಸಿದರು.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಬಿಡುಗಡೆ ಮಾಡಿರುವ ಆರೋಪ ಎದುರಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಮುಖಂಡ, ವಕೀಲ ದೇವರಾಜೇ ಗೌಡ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿತ್ತು. ಮಹಿಳೆಯೊಬ್ಬರ ಮೇಲೆ ದೇವರಾಜೇ ಗೌಡ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಸಂಬಂಧ ಅರ್ಜಿದಾರ ದೇವರಾಜೇಗೌಡರನ್ನು ಪೊಲೀಸರು ಬಂಧಿಸಿದ್ದರು. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement