ಸಿಜೆಪಿಯ ಸೌರವ ದಾಸ್, ಅಶುತೋಷ ರಾಂಕಾ ಬಿಡುಗಡೆಗೆ ಆದೇಶ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ ಅಂಗವಾಗಿ ನಿಷೇಧಾಜ್ಞೆ ಉಲ್ಲಂಘಿಸಿ ಜಂತರ್ ಮಂತರ್‌ಗೆ ಪ್ರವೇಶಿಸಿದ ಆರೋಪದ ಮೇಲೆ ಅಕ್ಟೋಬರ್ 14ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಸಿಜೆಪಿ (CJP) ನಾಯಕರಾದ ಸೌರವ ದಾಸ್ ಮತ್ತು ಅಶುತೋಷ ರಾಂಕಾ ಅವರನ್ನು ಬಿಡುಗಡೆ ಮಾಡುವಂತೆ ದೆಹಲಿಯ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಬುಧವಾರ (ಅಕ್ಟೋಬರ್ 21) ಆದೇಶಿಸಿದ್ದಾರೆ.
ಇಂದು, ಬುಧವಾರ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಎದುರು ಇಬ್ಬರನ್ನೂ ಹಾಜರುಪಡಿಸಿದ ದೆಹಲಿ ಪೊಲೀಸರು ಅವರಿಬ್ಬರ ನ್ಯಾಯಾಂಗ ಬಂಧನವನ್ನು 3 ದಿನಗಳ ಕಾಲ ವಿಸ್ತರಿಸುವಂತೆ ಕೋರಿದ್ದರು. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್, ಮೊದಲಿಗೆ ಆದೇಶವನ್ನು ಕಾಯ್ದಿರಿಸಿ ನಂತರ ತೀರ್ಪು ಪ್ರಕಟಿಸಿದರು.
ಇಬ್ಬರೂ ಅಕ್ಟೋಬರ್ 14ರಿಂದ ಬಂಧನದಲ್ಲಿದ್ದರು. ಅಂದು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮಹೇಶಕುಮಾರ ಮೀನಾ ಅವರು ಇಬ್ಬರನ್ನೂ ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 19ಕ್ಕೆ ನಿಗದಿಪಡಿಸಲಾಗಿತ್ತು. ಅಂದು ಅರ್ಜಿದಾರರ ನ್ಯಾಯಾಂಗ ಬಂಧನವನ್ನು ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಲಾಗಿತ್ತು.

ಇದಕ್ಕೂ ಮುನ್ನ ಬುಧವಾರ, ಇದಕ್ಕೂ ಮುನ್ನ ಬುಧವಾರ, ತಮ್ಮನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಆದೇಶವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಈ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನಿರ್ಧಾರಕ್ಕೆ ಕಾಯುವಂತೆ ಸೂಚಿಸಿತ್ತು. ನಂತರ ಸೌರವ ದಾಸ್ ಮತ್ತು ಅಶುತೋಷ ರಾಂಕಾ ಹಿಂಪಡೆದಿದ್ದರು.
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಲಾಗಿದ್ದ ಹಿನ್ನೆಲೆಯಲ್ಲಿ, ಅಕ್ಟೋಬರ್ 10ರಂದು ವಿಮಾನ ನಿಲ್ದಾಣವೊಂದರಲ್ಲಿ ಇವರಿಬ್ಬರನ್ನು ಮೊದಲ ಬಾರಿಗೆ ವಶಕ್ಕೆ ಪಡೆಯಲಾಗಿತ್ತು. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಸೆಕ್ಷನ್‌ 126 ಮತ್ತು 170ರ ಅಡಿಯಲ್ಲಿ ಅವರ ವಿರುದ್ಧ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಕ್ರಿಯೆ ಆರಂಭಿಸಲಾಗಿತ್ತು.
ನಂತರ ಅಕ್ಟೋಬರ್ 11ರಂದು ತಲಾ 50,000 ರೂ. ಮೊತ್ತದ ಶಾಂತಿ ಕಾಪಾಡುವ ಬಾಂಡ್‌ಗಳನ್ನು ಸಲ್ಲಿಸುವಂತೆ ಸೂಚಿಸಿ ಇಬ್ಬರನ್ನೂ ಬಿಡುಗಡೆ ಮಾಡಲಾಗಿತ್ತು.

ಪ್ರಮುಖ ಸುದ್ದಿ :-   ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ

ಆದರೆ, ಅಕ್ಟೋಬರ್ 13ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಯತ್ನಿಸುವ ಮೂಲಕ ಬಾಂಡ್‌ನ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಕ್ಟೋಬರ್ 14ರಂದು ಮತ್ತೆ ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಅಕ್ಟೋಬರ್ 19ರಂದು ನ್ಯಾಯಾಂಗ ಬಂಧನವನ್ನು ವಿಸ್ತರಿಸುವ ಸಂದರ್ಭದಲ್ಲಿ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ರಿತು ರಾಜ್ ಅವರು ನೀಡಿದ್ದ ಆದೇಶದಲ್ಲಿ, ಪ್ರತಿವಾದಿಗಳು ಉದ್ದೇಶಪೂರ್ವಕವಾಗಿ ಶಾಂತಿ ಕಾಪಾಡುವ ಬಾಂಡ್‌ಗಳ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಉಲ್ಲೇಖಿಸಿದ್ದರು.
ಈಗ, ಅಕ್ಟೋಬರ್ 14ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಇವರ ಬಿಡುಗಡೆಗೆ ಬುಧವಾರ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆದೇಶ ನೀಡಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement