ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್…! ಡೆತ್​ನೋಟ್​ನಲ್ಲಿ ಕಿರುಕುಳದ ಆರೋಪ

ಬೆಂಗಳೂರು : ನಗರದ ಪೊಲೀಸ್ ಪೇದೆಯೊಬ್ಬರು ಪತ್ನಿ ಮತ್ತು ಮಾವನ ಕಿರುಕುಳದ ಹಿನ್ನೆಲೆಯಲ್ಲಿ ಸಮವಸ್ತ್ರದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಬೆಂಗಳೂರಿನ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದ 34 ವರ್ಷದ ಎಚ್‌ಸಿ ತಿಪ್ಪಣ್ಣ ಎಂದು ಪೊಲೀಸರು ಗುರುತಿಸಿದ್ದಾರೆ. ಇವರು ವಿಜಯಪುರ ಜಿಲ್ಲೆಯ ಸಿಂದಗಿ ಸಮೀಪದ ಹಂದಿಗನೂರು ಗ್ರಾಮದವರು.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಇಂಜಿನಿಯರ್ ಅತುಲ್ ಸುಭಾಷ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಈ ಘಟನೆ ನಡೆದಿದೆ. ಅತುಲ್‌ ಅವರು ವೀಡಿಯೊ ಮತ್ತು ಪತ್ರದಲ್ಲಿ ಪತ್ನಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರು.
ಹೆಡ್ ಕಾನ್‌ಸ್ಟೆಬಲ್ ತಿಪ್ಪಣ್ಣ ಅವರು ನಗರದ ಹೀಲಳಿಗೆ ರೈಲು ನಿಲ್ದಾಣ ಮತ್ತು ಕಾರ್ಮೆಲಾರಂ ಹುಸಗೂರು ರೈಲ್ವೆ ಗೇಟ್ ನಡುವಿನ ರೈಲು ಹಳಿಗಳ ಮೇಲೆ ಶುಕ್ರವಾರ ರಾತ್ರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ದೇಹವನ್ನು ಆಸ್ಪತ್ರೆಯ ಶವಾಗಾರಕ್ಕೆ ಒಯ್ಯಲಾಗಿದೆ. ಈ ಸಂಬಂಧ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್‌ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ಆತ್ಮಹತ್ಯೆ ಪತ್ರವನ್ನು ಬರೆದಿಟ್ಟು ಕಾನ್‌ಸ್ಟೆಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಜೀವನವನ್ನು ಕೊನೆಗೊಳಿಸುವ ನಿರ್ಧಾರಕ್ಕೆ ತನ್ನ ಹೆಂಡತಿ ಮತ್ತು ಮಾವ ಕಾರಣ ಎಂದು ಆರೋಪಿಸಿದ್ದಾರೆ.
ತಿಪ್ಪಣ್ಣ ಅವರು ತಮ್ಮ ಪತ್ನಿ ಮತ್ತು ಮಾವ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದು, ಚಿತ್ರಹಿಂಸೆಯಿಂದ “ತೀವ್ರವಾಗಿ ನೊಂದು” ನಂತರ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ. “ಡಿಸೆಂಬರ್ 12 ರಂದು, ಅವರು 7.26 ಕ್ಕೆ ನನಗೆ ಕರೆ ಮಾಡಿದರು, 14 ನಿಮಿಷಗಳ ಕಾಲ ಮಾತನಾಡಿದರು ಮತ್ತು ನನಗೆ ಬೆದರಿಕೆ ಹಾಕಿದರು ಎಂದು ಅವರು ಬರೆದು ವಿವರಗಳನ್ನು ಹಂಚಿಕೊಂಡಿದ್ದಾರೆ.
ನೀನು ಸತ್ತು ಹೋಗು, ನನ್ನ ಮಗಳು ಚೆನ್ನಾಗಿ ಇರುತ್ತಾಳೆ’ ಎಂದು ಹೇಳಿ ಅವಾಚ್ಯ ಪದಗಳಿಂದ ಮಾವ ನಿಂದಿಸಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ತಿಪ್ಪಣ್ಣ ಉಲ್ಲೇಖಿಸಿದ್ದಾರೆ. ಪೊಲೀಸರು ಬಿಎನ್‌ಎಸ್‌ನ ಸೆಕ್ಷನ್ 108, 351 (3), ಮತ್ತು 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ
ಈ ವಾರದ ಆರಂಭದಲ್ಲಿ, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಇಂಜಿನಿಯರ್ ಅತುಲ್ ಸುಭಾಷ ಅವರು ವೀಡಿಯೊ ಮತ್ತು ಪತ್ರದಲ್ಲಿ ಪತ್ನಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಅತುಲ್ ಸುಭಾಷ ಆತ್ಮಹತ್ಯೆ ಮಾಡಿಕೊಂಡಿದ್ದರು.ಅತುಲ್ ಸುಭಾಷ ಅವರು ತಮ್ಮ ಪತ್ನಿ ಮತ್ತು ಅವರ ಕುಟುಂಬದ ಕಿರುಕುಳವನ್ನು ಆರೋಪಿಸಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಆತ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಪತ್ನಿಯ ವಿರುದ್ಧ ಹಲವು ಆರೋಪಗಳನ್ನು ಮಾಡಿದ ಒಂದು ಗಂಟೆಗೂ ಹೆಚ್ಚು ಅವಧಿಯ ವೀಡಿಯೊ ಮಾಡಿದ್ದರು. ಹಾಗೂ 24 ಪುಟಗಳ ಆತ್ಮಹತ್ಯೆ ಪತ್ರವನ್ನೂ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
ವಿಚ್ಛೇದನಕ್ಕೆ ಸಂಬಂಧಿಸಿ ಪತ್ನಿ ನಿಕಿತಾ ಸಿಂಘಾನಿಯಾ ತನಗೆ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಗಿ ಟಿಪ್ಪಣಿಯಲ್ಲಿ ಹೇಳಿಕೊಂಡಿದ್ದಾರೆ. ಕಿರುಕುಳಕ್ಕೊಳಗಾದ ಗಂಡಂದಿರನ್ನು ರಕ್ಷಿಸಲು ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿ ಅತುಲ್‌ ಸುಭಾಷ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಸುಪ್ರೀಂ ಕೋರ್ಟ್‌ಗೆ ಇಮೇಲ್ ಕಳುಹಿಸಿದ್ದರು.

ಪ್ರಮುಖ ಸುದ್ದಿ :-   ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement