ರಾಜ್ಯದಲ್ಲಿ ಗುರುವಾರ 1074 ಪಾಸಿಟಿವ್, ಪಾಸಿಟಿವಿಟಿ ದರ 0.63%ಕ್ಕೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆಯಲ್ಲಿ ಸ್ವಲ್ಪ ಮಟ್ಟಿಗೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1,074 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಇದೇವೇಳೆ 4 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ 1,136 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು 16,998 ಸಕ್ರಿಯ ಪ್ರಕರಣಗಳಿವೆ. ಒಟ್ಟು ಈವರೆಗೆ ಒಟ್ಟು 29,58,164 ಜನರಿಗೆ ಸೋಂಕು ತಗುಲಿದೆ. 29,04,683 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.63ಕ್ಕೆ ಇಳಿಕೆಯಾಗಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.37ರಷ್ಟಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ, ಬೀದರ್, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರ 343, ಚಿಕ್ಕಮಗಳೂರು 68, ದಕ್ಷಿಣ ಕನ್ನಡ 176, ಹಾಸನ 81, ಕೊಡಗು 59, ಉಡುಪಿ 126 ಪ್ರಕರಣಗಳು ವರದಿಯಾಗಿವೆ.
ಬೆಂಗಳೂರಿನಲ್ಲಿ ಕೂಡ ಇಂದು 343 ಕೇಸ್ ದಾಖಲಾಗಿದ್ದು, ಕಳೆದ ಮೂರು ದಿನಗಳಿಂದ ಕೇಸ್ 300ರ ಆಸುಪಾಸಿನಲ್ಲಿ ದಾಖಲಾಗುತ್ತಿದೆ. ಬೆಂಗಳೂರಿನಲ್ಲಿ ಕೊರೊನಾಗೆ ಮೂವರು ಮೃತಪಟ್ಟಿದ್ದಾರೆ. 251 ಜನ ಇಂದು ಡಿಸ್ಸಾರ್ಜ್ ಆಗಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

09-09-2021 HMB Kannada

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement