ರಾಷ್ಟ್ರಪತಿ ಚುನಾವಣೆ : ಟ್ವೀಟ್‌ ಮೂಲಕ ‘ದ್ರೌಪದಿ ಮುರ್ಮುಗೆ ಬೆಂಬಲ ನೀಡುವ ಸುಳಿವು ನೀಡಿದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ

ನವದೆಹಲಿ: ಎನ್‌ಡಿಎಗೆ ಸಿಕ್ಕ ದೊಡ್ಡ ಬೆಂಬಲದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಘೋಷಿಸಿರುವುದನ್ನು ಸ್ವಾಗತಿಸಿದೆ.
ಬುಧವಾರ ಟ್ವಿಟರ್‌ನಲ್ಲಿ ವೈಎಸ್‌ಆರ್‌ಸಿಪಿ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದೀಯ ಪಕ್ಷದ ನಾಯಕ ವಿಜಯಸಾಯಿ ರೆಡ್ಡಿ ಅವರು ಮುರ್ಮು ಭಾರತದ “ಶ್ರೇಷ್ಠ ರಾಷ್ಟ್ರಪತಿ” ಎಂದು ಸಾಬೀತುಪಡಿಸುತ್ತಾರೆ ಎಂಬ ಪ್ರಧಾನಿ ಮೋದಿ ಹೇಳಿರುವುದನ್ನು ಒಪ್ಪಿಕೊಂಡಿದ್ದಾರೆ. ಎನ್‌ಡಿಎ ಅಧ್ಯಕ್ಷೀಯ ಆಯ್ಕೆಗೆ ವೈಎಸ್‌ಆರ್‌ಸಿಪಿ ಪಕ್ಷವು ಬೆಂಬಲ ನೀಡುತ್ತದೆ ಎಂಬುದಕ್ಕೆ ಇದು ಸುಳಿವು ಎಂದು ವಿಶ್ಲೇಷಿಸಲಾಗುತ್ತಿದೆ. ಬಿಜೆಡಿ ಮತ್ತು ಜೆಡಿಯು ಈಗಾಗಲೇ ಮುರ್ಮು ಅವರಿಗೆ ಬೆಂಬಲ ಘೋಷಿಸಿರುವುದರಿಂದ ಅವರು ಚುನಾವಣೆಯಲ್ಲಿ ಆರಾಮವಾಗಿ ಗೆಲ್ಲುವ ನಿರೀಕ್ಷೆಯಿದೆ.

ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳುತ್ತಿರುವುದರಿಂದ, ಈ ಮುಂಬರುವ ಖಾಲಿ ಸ್ಥಾನಕ್ಕೆ ಜುಲೈ 18 ರಂದು ಚುನಾವಣೆ ನಡೆಯಲಿದೆ. ಸಂಸತ್ತಿನ ಉಭಯ ಸದನಗಳು ಮತ್ತು ವಿಧಾನಸಭೆಗಳ ಚುನಾಯಿತ ಸದಸ್ಯರನ್ನು ಒಳಗೊಂಡಿರುವ ಚುನಾವಣಾ ಪ್ರಕ್ರಿಯೆಯಲ್ಲಿ ರಾಷ್ಟ್ರಪತಿಯನ್ನು ಆಯ್ಕೆ ಮಾಡಲಾಗುತ್ತದೆ. ಆದಾಗ್ಯೂ, ವಿವಿಧ ರಾಜ್ಯಗಳ ನಾಮನಿರ್ದೇಶಿತ ಸಂಸದರು ಮತ್ತು ಎಂಎಲ್‌ಸಿಗಳು ಈ ಚುನಾವಣೆಯಲ್ಲಿ ಭಾಗವಹಿಸಲು ಅರ್ಹರಲ್ಲ. ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮೂರನೇ ಹಂತದಲ್ಲಿ ಅಂದಾಜು 64.4%ರಷ್ಟು ಮತದಾನ

ಜಂಟಿ ವಿಪಕ್ಷಗಳ ಅಭ್ಯರ್ಥಿಯಾಗಿರುವ ಕೇಂದ್ರದ ಮಾಜಿ ಸಚಿವ ಯಶ್ವಂತ್‌ ಸಿನ್ಹಾ ಅವರು, ಜೂನ್ 27 ರಂದು ನಾಮಪತ್ರ ಸಲ್ಲಿಸಿದ ನಂತರ ಎಲ್ಲ ರಾಜಕೀಯ ಪಕ್ಷಗಳ ಬೆಂಬಲ ಪಡೆಯಲು ಸಾಧ್ಯವಾದಷ್ಟು ರಾಜ್ಯಗಳ ರಾಜಧಾನಿಗಳಿಗೆ ಭೇಟಿ ನೀಡುವುದಾ ಹೇಳಿದ್ದಾರೆ. ದ್ರೌಪದಿ ಮುರ್ಮ ಅವರು ಜೂನ್‌ ೨೫ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement