ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಬಿಜೆಪಿ ಶಾಸಕನಿಗೆ 25 ವರ್ಷಗಳ ಜೈಲು ಶಿಕ್ಷೆ

ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹೊತ್ತಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಒಂಬತ್ತು ವರ್ಷಗಳ ಬಳಿಕ 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದು, ವಿಧಾನಸಭೆಯಿಂದ ಅನರ್ಹತೆಯಾಗುವ ಭೀತಿ ಎದುರಿಸುತ್ತಿದ್ದಾರೆ.
ಈ ಅಪರಾಧವು 2014 ರಲ್ಲಿ ನಡೆದಿದ್ದು, ದೂರು ದಾಖಲಿಸಿದ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ಶಾಸಕರು ಕುಟುಂಬಕ್ಕೆ ಒತ್ತಡ ಮತ್ತು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಸಹೋದರ ಹೇಳಿದ್ದಾರೆ.
ಸೋನ್ಭದ್ರಾ ಜಿಲ್ಲೆಯ ದುಡ್ಡಿ ವಿಧಾನಸಭಾ ಕ್ಷೇತ್ರದ ಬುಡಕಟ್ಟು ಶಾಸಕ ರಾಮದುಲಾರೆ ಗೊಂಡ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ 25 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 10 ಲಕ್ಷ ದಂಡ ವಿಧಿಸಿದೆ.
2014ರಲ್ಲಿ ಗೊಂಡ್‌ ಪತ್ನಿ ದುಡ್ಡಿ ಕ್ಷೇತ್ರದ ಗ್ರಾಮ ಪಂಚಾಯತ ಅಧ್ಯಕ್ಷೆಯಾಗಿದ್ದರು. ಸ್ಥಳೀಯವಾಗಿ ಬಲಶಾಲಿಯಾಗಿದ್ದ ಗೊಂಡ್‌ ಬಾಲಕಿಯ ಮೇಲೆ ನವೆಂಬರ್ 4, 2014 ರಂದು ಅತ್ಯಾಚಾರವೆಸಗಿದ್ದು, ಈ ಕುರಿತು ಮೈರ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಕಳೆದ ವರ್ಷ ದುಡ್ಡಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಗೊಂಡ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರು ಮತ್ತು ಅವರ ಪ್ರಕರಣವನ್ನು ಸೋನ್‌ಭದ್ರಾದಲ್ಲಿರುವ ಸಂಸದ-ಶಾಸಕರ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ಅದು ವಿಚಾರಣೆ ಮಂಗಳವಾರ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿತು. ಆದರೆ ಇಂದು ಶುಕ್ರವಾರ ಶಿಕ್ಷೆ ಪ್ರಮಾಣ ಪ್ರಕಟಿಸಿತು.
ಪಬ್ಲಿಕ್ ಪ್ರಾಸಿಕ್ಯೂಟರ್ ಸತ್ಯಪ್ರಕಾಶ ತ್ರಿಪಾಠಿ ಅವರು, ”ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ ಹಾಗೂ ಅತ್ಯಾಚಾರ ಮತ್ತು ಭಾರತೀಯ ದಂಡ ಸಂಹಿತೆಯ ಸಾಕ್ಷ್ಯ ನಾಶಪಡಿಸುವ ಸೆಕ್ಷನ್‌ಗಳಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಶಾಸಕ ರಾಮದುಲಾರೆ ಗೊಂಡ್ ದೋಷಿ ಎಂದು ತೀರ್ಪು ನೀಡಲಾಗಿದೆ. ಎಂಪಿ-ಎಂಎಲ್‌ಎ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಅಹ್ಸನ್ ಉಲ್ಲಾ ಖಾನ್ ಅವರು ಶಾಸಕನಿಗೆ 25 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 10 ಲಕ್ಷ ದಂಡ ವಿಧಿಸಿದ್ದಾರೆ. ಈ ಮೊತ್ತವನ್ನು ಸಂತ್ರಸ್ತೆಗೆ ನೀಡಲಾಗುವುದು ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಕಾಂಗ್ರೆಸ್‌ ನಾಯಕ ಅಧೀರ್‌ ಹೇಳಿಕೆ ತಿರಸ್ಕರಿಸಿದ ನಂತರ ಪಶ್ಚಿಮ ಬಂಗಾಳ ಕಾಂಗ್ರೆಸ್ ಕಚೇರಿ ಮುಂದಿನ ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳಿಗೆ ಮಸಿ

ಸಂತ್ರಸ್ತೆ ಕುಟುಂಬವು, ತಮಗೆ ನ್ಯಾಯ ಸಿಗಲು ಬಹಳ ಸಮಯ ತೆಗೆದುಕೊಂಡಿತು. ಆದರೆ ತೀರ್ಪಿನಿಂದ ಸಂತೋಷವಾಗಿದೆ ಎಂದು ಹೇಳಿದ್ದಾರೆ. ಪ್ರಕರಣವನ್ನು ಹಿಂಪಡೆಯುವಂತೆ ರಾಮದುಲಾರೆ ಗೊಂಡ್‌ ಒಂದು ವರ್ಷದಿಂದ ತನಗೆ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದ ಎಂದು ಆಕೆಯ ಸಹೋದರ ಹೇಳಿದರು.
ಗೊಂಡ್ ಈಗ ಉತ್ತರ ಪ್ರದೇಶ ವಿಧಾನಸಭೆಯಿಂದ ಅನರ್ಹರಾಗುತ್ತಾರೆ ಮತ್ತು 403 ಬಲದ ಸದನದಲ್ಲಿ 254 ಸದಸ್ಯರನ್ನು ಹೊಂದಿರುವುದರಿಂದ ಇದು ಸಂಖ್ಯೆಯ ದೃಷ್ಟಿಯಿಂದ ಬಿಜೆಪಿಯ ಮೇಲೆ ಪರಿಣಾಮ ಬೀರುವುದಿಲ್ಲವಾದರೂ, ಪಕ್ಷವನ್ನು ಪ್ರತಿಪಕ್ಷಗಳ ದಾಳಿಯನ್ನು ಬಿಜೆಪಿ ಎದುರಿಸಬೇಕಾಗುತ್ತದೆ.
ಪ್ರಜಾಪ್ರತಿನಿಧಿ ಕಾಯಿದೆಯ ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆಗೆ ಗುರಿಯಾದ ಶಾಸಕರನ್ನು “ಅಂತಹ ಅಪರಾಧ ನಿರ್ಣಯದ ದಿನಾಂಕದಿಂದ” ಅನರ್ಹಗೊಳಿಸಲಾಗುತ್ತದೆ ಮತ್ತು ಸೇವೆ ಸಲ್ಲಿಸಿದ ನಂತರ ಆರು ವರ್ಷಗಳವರೆಗೆ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗಿರುತ್ತಾರೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement