ಹುಬ್ಬಳ್ಳಿಯಲ್ಲಿ ಇಂದು, ನಾಳೆ ೧೦ ಜಿಲ್ಲೆಗಳ ಕಾಂಗ್ರೆಸ್ ಪದಾಧಿಕಾರಿಗಳ ಸಭೆ

ಹುಬ್ಬಳ್ಳಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೆವಾಲಾ ಅಧ್ಯಕ್ಷತೆಯಲ್ಲಿ ನಾಳೆ (ಶುಕ್ರವಾರ) ಹುಬ್ಬಳ್ಳಿಯಲ್ಲಿ ಪಕ್ಷದ ೧೦ ಜಿಲ್ಲೆಗಳ ಪದಾಧಿಕಾರಿಗಳ ಸಭೆಗಳು ನಡೆಯವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಸಂಜೆ ೬ಗಂಟೆಗೆ ವಿಜಯಪುರ ಹಾಗೂ ಹಾವೇರಿ ಜಿಲ್ಲೆಗಳ ಪಕ್ಷದ ಮುಖಂಡರೊAದಿಗೆ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ ೯ಗಂಟೆಗೆ ನಗರದ ಗೋಕುಲ ಗಾರ್ಡನ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ. ಬಳಿಕ ೧೦ರಿಂದ ಸಂಜೆ ೭ಗಂಟೆ ವರೆಗೆ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸುವರು ಎಂದರು.
ಧಾರವಾಡ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಬೆಳಗಾವಿ ಸಹಿತ ೧೦ಜಿಲ್ಲೆಗಳ ಶಾಸಕರು, ಸಂಸದರು, ಮಾಜಿ ಶಾಸಕರು, ಮಾಜಿ ಸಂಸದರು, ೨೦೧೮ ಹಾಗೂ ೨೦೧೯ರ ಚುನಾವಣೆಗಳ ಪಕ್ಷದ ಅಭ್ಯರ್ಥಿಗಳು, ಮಹಾನಗರ ಜಿಲ್ಲಾಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳ ಜೊತೆ ಸುರ್ಜೆವಾಲಾ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ ಪಾಳ್ಗೊಳ್ಳಲಿದ್ದು, ಮುಂದಿನ ತಾಲೂಕು ಹಾಗೂ ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಎರಡು ಉಪ ಚುನಾವಣೆ ಸಿದ್ಧತೆ ಹಾಗೂ ಪಕ್ಷ ಸಂಘಟನೆ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ಶಾಸಕರಾದ ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಶ್ರೀನಿವಾಸ ಮಾನೆ, ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಮಾಜಿ ಪರಿಷತ್ ಸದಸ್ಯ ನಾಗರಾಜ ಛಬ್ಬಿ, ಉಭಯ ಅಧ್ಯಕ್ಷರಾದ ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ, ಮುಖಂಡರಾದ ಸದಾನಂದ ಡಂಗನವರ, ಎಫ್.ಎಚ್.ಜಕ್ಕಪ್ಪನವರ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement