ಇಬ್ಬರು ಕೂಲಿ ಕಾರ್ಮಿಕರನ್ನು ತುಳಿದು ಸಾಯಿಸಿದ ಆನೆ

ಹಾಸನ: ಕಾಫಿ ಎಸ್ಟೇಟ್‌ನ ಇಬ್ಬರು ಕೂಲಿ ಕಾರ್ಮಿಕರು ಆನೆ ತುಳಿದು ಮೃತಪಟ್ಟ ಘಟನೆ ಬೇಲೂರು ತಾಲೂಕಿನ ಕಡೆಗರ್ಜೆ ಗ್ರಾಮದ ಬಳಿ ಶುಕ್ರವಾರ ನಡೆದಿದೆ.

ಮೃತರನ್ನು ಅದೇ ಗ್ರಾಮದ ಚಿಕ್ಕಯ್ಯ (50) ಮತ್ತು ಈರಯ್ಯ (52) ಎಂದು ಗುರುತಿಸಲಾಗಿದೆ. ಕಾರ್ಮಿಕರು ಕಾಫಿ ಎಸ್ಟೇಟ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆನೆಯು ಮೊದಲು ತನ್ನ ಸೊಂಡಿಲಿನಿಂದ ಇಬ್ಬರನ್ನು ಹೊಡೆದು ನಂತರ ತುಳಿದು ಸಾಯಿಸಿದೆ ಎನ್ನಲಾಗಿದೆ.
ಆನೆ ದಾಳಿಗೆ ಹೆದರಿ ರೈತರು, ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಡಿಎಫ್‌ಒ ಬಸವರಾಜು ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಆಗಮಿಸಿ ಮೃತದೇಹಗಳನ್ನು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಮೀಪದ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಆನೆಗಳ ಹಾವಳಿ ತಡೆಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಘಟನೆಯನ್ನು ವಿರೋಧಿಸಿ ಗ್ರಾಮಸ್ಥರು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಧರಣಿ ನಡೆಸಿದರು. ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement