ಪಾಲನಪುರ: ಗುಜರಾತ್ನ ಬನಸ್ಕಾಂತ ಜಿಲ್ಲೆಯಲ್ಲಿ ಮಂಗಳವಾರ ಪಟಾಕಿ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಸಂಭವಿಸಿದ ಸ್ಫೋಟದಲ್ಲಿ ಕಟ್ಟಡ ಕುಸಿದು ಕನಿಷ್ಠ 13 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೀಸಾ ಪಟ್ಟಣದ ಬಳಿ ಇರುವ ಘಟಕದಲ್ಲಿ ಈ ಘಟನೆ ನಡೆದಿದೆ. “ಮಂಗಳವಾರ ಬೆಳಿಗ್ಗೆ 9: 45 ರ ಸುಮಾರಿಗೆ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ, ಇದರಿಂದಾಗಿ ಕಾರ್ಖಾನೆಯ ಸಂಪೂರ್ಣ ಆರ್ಸಿಸಿ ಮೇಲ್ಛಾವಣಿ ಕುಸಿದಿದೆ” ಎಂದು ಜಿಲ್ಲಾಧಿಕಾರಿ ಮಿಹಿರ್ ಪಟೇಲ್ ಹೇಳಿದ್ದಾರೆ.
ಕಾರ್ಖಾನೆಯಿಂದ 13 ಮಂದಿಯ ಶವಗಳನ್ನು ಹೊರತೆಗೆಯಲಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ ಆದರೆ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದರು.
ಪಟಾಕಿ ತಯಾರಿಕೆಗೆ ಬಳಸುತ್ತಿದ್ದ ಗನ್ ಪೌಡರ್ ನಲ್ಲಿ ಭಾರಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟವು ಬೆಂಕಿ ಹರಡಲು ಕಾರಣವಾಯಿತು ಮತ್ತು ಕಟ್ಟಡದ ಕೆಲವು ಭಾಗಗಳು ಕುಸಿದವು, ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಡೀಸಾದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ನೇಹಾ ಪಾಂಚಾಲ್ ಹೇಳಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರ್ಖಾನೆಯಲ್ಲಿ ಪಟಾಕಿ ತಯಾರಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಪಟೇಲ್ ಹೇಳಿದ್ದಾರೆ.
ಕಾರ್ಮಿಕರ ಕುಟುಂಬದ ಸದಸ್ಯರು ಸಹ ಕಾರ್ಖಾನೆಯ ಆವರಣದಲ್ಲಿ ವಾಸಿಸುತ್ತಿದ್ದರು ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರು ಹೇಳಿದರು.
. ಎಷ್ಟು ಕಾರ್ಮಿಕರು ಘಟನಾ ಸ್ಥಳದಲ್ಲಿದ್ದರು. ಅವರ್ಲಿ ಎಷ್ಟು ಮಂದಿ ಸುರಕ್ಷಿತವಾಗಿದ್ದಾರೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.ದೀಸಾ ಪುರಸಭೆಯ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ ಮತ್ತು ಅವಶೇಷಗಳಲ್ಲಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (SDRF) ತಂಡವೂ ಸ್ಥಳದಲ್ಲಿದೆ ಎಂದು ಅವರು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ