ಉಕ್ರೇನ್​ನಲ್ಲಿ ಸಿಲುಕಿರುವ ಮಗನ ಬಗ್ಗೆ ಚಿಂತೆ ಮಾಡಿ ಪ್ರಾಣಬಿಟ್ಟ ತಾಯಿ..ವಿಡಿಯೋ ಕಾಲ್​ನಲ್ಲಿ ತಾಯಿಯ ಅಂತಿಮ ದರ್ಶನ ಪಡೆದ ಮಗ..

ತಿರುಪತ್ತೂರು(ತಮಿಳುನಾಡು): ರಷ್ಯಾ ದಾಳಿಯಿಂದಾಗಿ ಉಕ್ರೇನ್​ನಲ್ಲಿ ಸಿಲುಕಿರುವ ತನ್ನ ಮಗನ ಬಗ್ಗೆ ತೀವ್ರವಾಗಿ ಚಿಂತಿಸುತ್ತಿದ್ದ ತಾಯಿಯೊಬ್ಬರು ಮೃತಪಟ್ಟಿದ್ದಾರೆ. ಯುದ್ಧಪೀಡಿತ ದೇಶದಿಂದ ಸ್ವದೇಶಕ್ಕೆ ಬರಲು ಸಾಧ್ಯವಾಗದ ಮಗ ವಿಡಿಯೋ ಕರೆಯಲ್ಲೇ ಅಮ್ಮನ ಪಾರ್ಥಿವ ಶರೀರದ ದರ್ಶನ ಪಡೆದಿದ್ದು ಮನಕಲಕುವಂತಿತ್ತು.ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಪುದೂರಿನ ಶಶಿಕಲಾ ಮೃತ ಮಹಿಳೆ. ಶಂಕರ್ ಮತ್ತು ಶಶಿಕಲಾ ದಂಪತಿಯ ಮಗ ಶಕ್ತಿವೆಲ್ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದು, ಉಕ್ರೇನ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇತ್ತ ಮೊದಲೇ ಬಿಪಿ ಮತ್ತು ಡಯಾಬಿಟಿಸ್​ನಿಂದ ಬಳಲುತ್ತಿದ್ದ ಶಶಿಕಲಾ ಉಕ್ರೇನ್​ನಲ್ಲಿ ಯುದ್ಧ ಆರಂಭವಾದ ಬಳಿಕ ಮಗನ ಪರಿಸ್ಥಿತಿ ಬಗ್ಗೆ ತೀವ್ರವಾಗಿ ಚಿಂತಿಸುತ್ತಿದ್ದರಂತೆ. ಫೆ.26 ರ ಸಂಜೆ ಅಸ್ವಸ್ಥರಾಗಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಆಸ್ಪತ್ರೆಗೆ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದಿ ಈ ಟಿವಿ ಭಾರತ.ಕಾಮ್‌ ವರದಿ ಮಾಡಿದೆ.

ಶಕ್ತಿವೇಲ್ ಉಕ್ರೇನ್​ನಲ್ಲಿ ಸಿಲುಕಿಕೊಂಡಿದ್ದು, ತಾಯಿನ ಅಂತ್ಯಸಂಸ್ಕಾರಕ್ಕೆ ಬರುವ ಸ್ಥಿತಿಯಲ್ಲಿರಲಿಲ್ಲ. ಅಂತೆಯೇ, ಪೋಷಕರು ವಿಡಿಯೋ ಕರೆಯಲ್ಲೇ ಮಗನಿಗೆ ತಾಯಿಯ ಮೃತದೇಹದ ಅಂತಿಮ ದರ್ಶನ ಮಾಡಿಸಿದರು.ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ಗನ್‌ ಹಿಡಿದ ಉಕ್ರೇನ್ ಸುಂದರಿ

ಪ್ರಮುಖ ಸುದ್ದಿ :-   ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

ತಿರುಪತ್ತೂರು (ತಮಿಳುನಾಡು): ರಷ್ಯಾ ದಾಳಿಯಿಂದಾಗಿ ಉಕ್ರೇನ್​ನಲ್ಲಿ ಅಂದಾಜು 13 ಸಾವಿರ ಭಾರತೀಯರು ಸಿಲುಕಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಮಕ್ಕಳನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪೋಷಕರು ಮನವಿ ಮಾಡುತ್ತಿದ್ದಾರೆ.
ಈ ಮಧ್ಯೆ ಉಕ್ರೇನ್​ನಲ್ಲಿ ಸಿಲುಕಿಕೊಂಡಿರುವ ತನ್ನ ಮಗನ ಬಗ್ಗೆ ತೀವ್ರವಾಗಿ ಚಿಂತಿಸಿ, ಆಘಾತದಿಂದ ತಾಯಿಯೊಬ್ಬರು ಮೃತಪಟ್ಟ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.. ನಂತರ ಯುದ್ಧಪೀಡಿತದಲ್ಲಿ ಸಿಲುಕಿಕೊಂಡಿರುವ ಮಗನಿಗೆ ಸ್ವದೇಶಕ್ಕೆ ಬರಲು ಸಾಧ್ಯವಾಗದ ಕಾರಣ ಆತ ವಿಡಿಯೋ ಕರೆಯಲ್ಲೇ ಅಮ್ಮನ ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ. ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಪುದೂರಿನ ಶಶಿಕಲಾ ಮೃತ ಮಹಿಳೆಯಾಗಿದ್ದು, ಶಂಕರ ಮತ್ತು ಶಶಿಕಲಾ ದಂಪತಿಯ ಮಗ ಶಕ್ತಿವೇಲು ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದು, ಉಕ್ರೇನ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಡಯಾಬಿಟಿಸ್​ನಿಂದ ಬಳಲುತ್ತಿದ್ದ ಶಶಿಕಲಾ ಉಕ್ರೇನ್​ನಲ್ಲಿ ಯುದ್ಧ ಆರಂಭವಾದ ಬಳಿಕ ಮಗನ ಬಗ್ಗೆಯೇ ಚಿಂತೆಕ್ರಾಂತರಾಗಿದ್ದರಂತೆ. ಇದೇಚಿಂತೆಯಲ್ಲೇ ಫೆ.26 ರ ಸಂಜೆ ಅಸ್ವಸ್ಥರಾಗಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಉಕ್ರೇನ್​ನಲ್ಲಿರುವ ಮಗನಿಗೆ ವಿಡಿಯೋ ಕರೆಯಲ್ಲೇ ಮಗನಿಗೆ ತಾಯಿಯ ಮೃತದೇಹದ ಅಂತಿಮ ದರ್ಶನ ಮಾಡಿಸಿದ್ದಾರೆ.

ಪ್ರಮುಖ ಸುದ್ದಿ :-   ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀ ರಾಮ, ಕ್ರಿಕೆಟ್‌ ಆಟಗಾರರ ಹೆಸರು ಬರೆದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣ ; ಇಬ್ಬರು ಪ್ರಾಧ್ಯಾಪಕರು ಅಮಾನತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement