ಟೊಮ್ಯಾಟೊ ಬೆಲೆ ನಷ್ಟ: ರೈತ ದಂಪತಿ ಆತ್ಮಹತ್ಯೆ

ಬೆಂಗಳೂರು: ಸಾಲ ಮಾಡಿ ಬೆಳೆದಿದ್ದ ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದ ರೈತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೊಂಡ್ಲಿಗಾನಹಳ್ಳಿಯಲ್ಲಿ ನಡೆದಿದೆ.
ಕೊಂಡ್ಲಿಗಾನಹಳ್ಳಿಯ ವೆಂಕಟರೆಡ್ಡಿ(೫೨) ಮತ್ತು ರತ್ನಮ್ಮ (೪೬) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಮೂರು ಲಕ್ಷ ರೂ ಸಾಲ ಮಾಡಿ ಟೊಮ್ಯಾಟೊ ಬೆಳೆದು ೫ ಲಕ್ಷ ರೂಪಾಯಿ ಲಾಭದ ನಿರೀಕ್ಷೆಯಲ್ಲಿದ್ದ ದಂಪತಿಗೆ ಸರಿಯಾದ ಬೆಲೆ ಬಾರದೆ ಸಾಲ ತಿರಿಸುವುದು ಎನ್ನುವ ಚಿಂತೆಗೆ ಬಿದ್ದು ದಂಪತಿಯು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಒಂದು ವರ್ಷದಿಂದ ತಮ್ಮ ಜಮೀನಿನಲ್ಲಿ ಬಂಡವಾಳ ಹಾಕಿ ಮೊದಲು ಕ್ಯಾರೆಟ್, ನಂತರ ಟೊಮ್ಯಾಟೊ ಬೆಳೆ ಬೆಳೆದಿದ್ದ ನತದೃಷ್ಟ ದಂಪತಿ. ರ್ಕಾರ ಲಾಕ್ ಡೌನ್ ಹಾಗೂ ಕಠಿಣ ನಿಯಮಾವಳಿ ವಿಧಿಸಿದ್ದ ಕಾರಣ ರೈತ ವೆಂಕಟರೆಡ್ಡಿ ಬೆಳೆದಿದ್ದ ಬೆಳೆಗೆ ಸೂಕ್ತ ಬೆಲೆ ಬಂದಿರಲಿಲ್ಲ ,
ಮತ್ತೊಂದೆಡೆ ಕೈ ಸಾಲ ಮಾಡಿದವರು ಹಣಕ್ಕಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ದಂಪತಿ ನಿನ್ನೆ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಟ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement