ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾಗಿ ಡಾ.ಪುಷ್ಪಾ ಆಯ್ಕೆ

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಕವಯತ್ರಿ ಹಾಗೂ ಲೇಖಕಿ ಡಾ.ಎಚ್‌.ಎಲ್‌. ಪುಷ್ಪಾ ಅವರು ಆಯ್ಕೆಯಾಗಿದ್ದಾರೆ. ಅವರು ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿರುತ್ತಾರೆ.
ಹಾಲಿ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ ಹಾಗೂ ಪುಷ್ಪಾ ಅವರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಪುಷ್ಪಾ ಅವರು 62 ಮತಗಳ ಅಂತರದಿಂದ ಜಯಗಳಿಸಿದರು.

ಬೆಂಗಳೂರು ನನಗರದ ಎನ್‌.ಆರ್‌.ಕಾಲೊನಿಯಲ್ಲಿರುವ ಬಿಎಂಶ್ರೀ ಪ್ರತಿಷ್ಠಾನದಲ್ಲಿ ಮತದಾನಕ್ಕೆ ಭಾನುವಾರ ಬೆಳಗ್ಗೆ 10ರಿಂದ ಸಂಜೆ 4 ಗಂಟೆ ವರೆಗೆ ಅವಕಾಶ ಕಲ್ಪಿಸಲಾಗಿತ್ತು.
ಸಂಘದ 1,330 ಸದಸ್ಯರಲ್ಲಿ1,295 ಮಂದಿ ಮತದಾನದ ಅರ್ಹತೆ ಹೊಂದಿದ್ದರು. ಜಿಲ್ಲೆಗಳಲ್ಲಿ ಸದಸ್ಯರು ಅಂಚೆಗಳ ಮೂಲಕ ಮತ ಚಲಾಯಿಸಿದ್ದರು. ಬೆಂಗಳೂರಿನಲ್ಲಿ 650 ಮಂದಿ ಮತದಾನದ ಅರ್ಹತೆ ಹೊಂದಿದ್ದರು. 280 ಮಂದಿ ಮಾತ್ರ ಮತ ಚಲಾಯಿಸಿದ್ದರು. ರಾಜ್ಯದ ಇತರೆ ಭಾಗಗಳಿಂದ 419 ಮಂದಿ ಅಂಚೆ ಮೂಲಕ ಮತ ಚಲಾಯಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement