ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡದ ಮಂಕಿ, ಶಿರಾಲಿ, ಹೊನ್ನಾವರ, ಗೋಕರ್ಣ, ಸಿದ್ದಾಪುರ, ವಿಜಯಪುರ ಜಿಲ್ಲೆಯ ವಿಜಯಪುರ, ಆಲಮಟ್ಟಿ, ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಭಾರಿ ಮಳೆಯಾಗಿದೆ. ಕುಂದಾಪುರ, ಬಸವನಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಪುತ್ತೂರು, ಕೋಟಾ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರದಲ್ಲಿ ಮಳೆಯಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement