ಸಚಿವರ ಎದುರೇ ಗಂಡನಿಗೆ ಕಪಾಳ ಮೋಕ್ಷ ಮಾಡಿದ ಪತ್ನಿ…!

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಫೈಟ್‌ ಹುಕ್ಕೇರಿ ತಾಲೂಕಿನಲ್ಲಿ ತಾರಕ್ಕೇರಿದೆ. ಸಚಿವ ಸತೀಶ ಜಾರಕಿಹೊಳಿ ಎದುರೇ ಮಹಿಳೆಯೊಬ್ಬರು ತನ್ನ ಗಂಡನ ಕಪಾಳಕ್ಕೆ ಬಾರಿಸಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿ ಅವರ ಕಾಲರ್ ಹಿಡಿದು ಎಳೆದಾಡಿದ ಪತ್ನಿ ಕಪಾಳಕ್ಕೆ ಹೊಡೆದಿದ್ದಾಳೆ. ಜಾರಕಿಹೊಳಿಗೆ ಬೆಂಬಲ ನೀಡಿದ್ದಕ್ಕಾಗಿ ಪತಿಯನ್ನು ಪತ್ನಿ ತರಾಟೆಗೆ ತೆಗೆದುಕೊಂಡಿದ್ದಾಳೆ.
ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಫೈಟ್ ತಾರಕಕ್ಕೇರಿದ್ದು, ಸಚಿವ ಸತೀಶ ಜಾರಕಿಹೊಳಿ ಹಾಗೂ ಮಾಜಿ ಸಂಸದ ರಮೇಶ ಕತ್ತಿ ಪ್ರತಿಷ್ಠೆಯ ಕಣ ತೀವ್ರ ತುರುಸು ಪಡೆದಿದೆ.

ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಸಚಿವ ಸತೀಶ ಜಾರಕಿಹೊಳಿ‌ ಎದುರೇ ಗಲಾಟೆ ಆಗಿದ್ದು ಸಚಿವ ಸತೀಶ ಜಾರಕಿಹೊಳಿ ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನ ಪತ್ನಿ ನಿರ್ದೇಶಕನ ಕೊರಳು ಪಟ್ಟಿ ಹಿಡಿದು ಎಳೆದಾಡಿ ಎಳೆದು ಕಪಾಳ ಮೋಕ್ಷ ಮಾಡಿದ್ದಾಳೆ.
ಮದಿಹಳ್ಳಿ ಗ್ರಾಮದ ಪಿಕೆಪಿಎಸ್ ಕಚೇರಿ ಎದುರು ಗಲಾಟೆ ಸಂಭವಿಸಿದೆ. ಪಿಕೆಪಿಎಸ್ ಒಳಗೆ ಸಚಿವ ಸತೀಶ ಜಾರಕಿಹೊಳಿ ತೆರಳಿದ ಬಳಿಕ ಮತ್ತೆ ಪತಿಯನ್ನು ಜಾರಕಿಹೊಳಿ‌ ಸಹೋದರರು ಹೈ ಜಾಕ್ ಮಾಡಿ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮಾಜಿ ಸಂಸದ ರಮೇಶ ಕತ್ತಿ ಕೂಡ ಬಂದ ನಂತರ ಎರಡು ಗುಂಪುಗಳ ನಡುವೆ ಸಂಘರ್ಷ ಗಲಾಟೆ ಹಂತ ತಲುಪಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement