ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ, ಇಂದು ನಾಮಪತ್ರ ಸಲ್ಲಿಕೆ

ನವದೆಹಲಿ: ಐದು ಬಾರಿ ಲೋಕಸಭಾ ಸದಸ್ಯೆಯಾಗಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫೆಬ್ರವರಿ 27 ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ಬುಧವಾರ ಪ್ರಕಟಿಸಿದೆ. ಅವರು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ.
ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗಾಗಿ ಅವರು ಉತ್ತರ ಪ್ರದೇಶದ ರಾಯ್‌ ಬರೇಲಿ ಲೋಕಸಭಾ ಕ್ಷೇತ್ರ ಬಿಟ್ಟುಕೊಡಲಿದ್ದಾರೆ ಎಂದು ಹೇಳಲಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಸೋನಿಯಾ ಗಾಂಧಿ, ಹಿಮಾಚಲ ಪ್ರದೇಶದಿಂದ ಅಭಿಷೇಕ ಮನು ಸಿಂಘ್ವಿ, ಬಿಹಾರದಿಂದ ಅಖಿಲೇಶ ಪ್ರಸಾದ್ ಸಿಂಗ್ ಮತ್ತು ಮಹಾರಾಷ್ಟ್ರದಿಂದ ಚಂದ್ರಕಾಂತ ಹಂದೋರೆ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದ ಏಕೈಕ ಸ್ಥಾನವನ್ನು ಅಭಿಷೇಕ ಮನು ಸಿಂಘ್ವಿ ಸುಲಭವಾಗಿ ಗೆಲ್ಲುವ ನಿರೀಕ್ಷೆಯಿದೆ. ಅವರು ತೃಣಮೂಲ ಕಾಂಗ್ರೆಸ್ ಬೆಂಬಲದೊಂದಿಗೆ ಪಶ್ಚಿಮ ಬಂಗಾಳದಿಂದ ಈ ಹಿಂದೆ ಆಯ್ಕೆಯಾಗಿದ್ದರು. ಆ ಬಳಿಕ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಕಾಂಗ್ರೆಸ್‌ಗೆ ಯಾವುದೇ ಶಾಸಕರು ಆಯ್ಕೆಯಾಗಿಲ್ಲ.
ಅಖಿಲೇಶ ಪ್ರಸಾದ್ ಸಿಂಗ್ ಅವರಿಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ರಾಷ್ಟ್ರೀಯ ಜನತಾ ದಳ ಮತ್ತು ಎಡಪಕ್ಷಗಳ ಬೆಂಬಲದ ಅಗತ್ಯವಿದೆ. ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಪಕ್ಷಾಂತರಗೊಂಡ ನಂತರ ಹೆಚ್ಚಿನ ಕಾಂಗ್ರೆಸ್ ಶಾಸಕರು ಪಕ್ಷ ತೊರೆದು ಅಶೋಕ ಚವಾಣ ಅವರನ್ನು ಹಿಂಬಾಲಿಸಿದರೆ ಹಂದೋರ್ ಕಠಿಣ ಸ್ಪರ್ಧೆ ಎದುರಿಸಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಪ್ರಮುಖ ಸುದ್ದಿ :-   ಉಗ್ರರ ದಾಳಿಯಲ್ಲಿ ಓರ್ವ ವಾಯುಪಡೆ ಸಿಬ್ಬಂದಿ ಹುತಾತ್ಮ, 5 ಮಂದಿಗೆ ಗಾಯ

56 ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ.
ಹಿಮಾಚಲ ಪ್ರದೇಶ, ತೆಲಂಗಾಣ ಮತ್ತು ರಾಜಸ್ಥಾನ ರಾಜ್ಯ ಕಾಂಗ್ರೆಸ್ ಘಟಕಗಳು ಸೋನಿಯಾ ಗಾಂಧಿ ಅವರನ್ನು ತಮ್ಮ ರಾಜ್ಯಗಳಿಂದ ಸ್ಪರ್ಧಿಸುವಂತೆ ಒತ್ತಾಯಿಸಿದವು. ಗಾಂಧಿ ಕುಟುಂಬದ ನಿಕಟವರ್ತಿ ಎಂದು ಪರಿಗಣಿಸಲಾದ ನಾಯಕರೊಬ್ಬರು ಅವರು ಉತ್ತರ ಭಾರತದ ಸ್ಥಾನಕ್ಕೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.

ನಾಲ್ವರು ಪ್ರಮುಖ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ ಮತ್ತು ಜೈರಾಮ ರಮೇಶ ಅವರು ದಕ್ಷಿಣ ಭಾರತವನ್ನು ಪ್ರತಿನಿಧಿಸುತ್ತಾರೆ.
ಸೋನಿಯಾ ಗಾಂಧಿಯವರು 1999 ರಲ್ಲಿ ಅಮೇಥಿ ಮತ್ತು ಬಳ್ಳಾರಿ (ಕರ್ನಾಟಕ) ನಿಂದ ಸಂಸತ್ತಿಗೆ ಮೊದಲ ಬಾರಿಗೆ ಆಯ್ಕೆಯಾದರು. ಅವರು ಅಮೇಥಿ ಸ್ಥಾನವನ್ನು ಉಳಿಸಿಕೊಂಡರು. 2004 ರಲ್ಲಿ, ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸಿದ್ದರಿಂದ ಅವರು ರಾಯ್ ಬರೇಲಿಗೆ ಸ್ಥಳಾಂತರಗೊಂಡು ಅಲ್ಲಿಂದ ಆಯ್ಕೆಯಾದರು.

ಪ್ರಮುಖ ಸುದ್ದಿ :-   'ಪ್ರಿಯಾಂಕಾ ಗಾಂಧಿ ವಿರುದ್ಧ ಪಕ್ಷದಲ್ಲೇ ದೊಡ್ಡ ಪಿತೂರಿ...ಜೂನ್ 4ರ ನಂತರ ಕಾಂಗ್ರೆಸ್ ಅಣ್ಣ-ತಂಗಿ ಬಣಗಳಾಗಿ ವಿಭಜನೆ' : ಕಾಂಗ್ರೆಸ್‌ ಮಾಜಿ ನಾಯಕನ ಸ್ಫೋಟಕ ಹೇಳಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement