
ಕಲಬುರಗಿ: ಜುಲೈ 28ರಂದು ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪ ಮಾಡಿದ್ದು ನಿಜ ಎಂದು ಕಾಂಗ್ರೆಸ್ಸಿನ ಆಳಂದ ಶಾಸಕ ಬಿಆರ್ ಪಾಟೀಲ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನ ಆತ್ಮಗೌರವಕ್ಕೆ ಧಕ್ಕೆ ಬರುವಂತೆ ನಡೆದುಕೊಂಡರೆ ರಾಜೀನಾಮೆ ನೀಡುವುದಾಗಿ ಹೇಳಿರುವುದು ನಿಜ. ಆದರೆ ನಿಖರವಾಗಿ ಏನು ಕಾರಣ ಎಂಬುದು ಸೇರಿದಂತೆ ಹಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ. ಎಂದರು.
ಶಾಸಕಾಂಗ ಪಕ್ಷದ ಸಭೆಯಲ್ಲಿ ನಾನು ಎದ್ದು ಹೊರ ನಡೆದಿದ್ದು ನಿಜ. ನನ್ನ ಆತ್ಮ ಗೌರವಕ್ಕೆ ಧಕ್ಕೆ ಬಂದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದೇನೆ. ನನ್ನ ಮಾತಿಗೆ ನಾನು ಬದ್ಧ ಎಂದು ಹೇಳಿದ್ದಾರೆ
ಜುಲೈ 28ರಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾನು ಯಾರ ಬಳಿಯೂ ಕ್ಷಮೆ ಕೇಳಿಲ್ಲ, ಕ್ಷಮೆ ಕೇಳುವ ತಪ್ಪನ್ನೂ ಮಾಡಿಲ್ಲ, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಾಯ ಮಾಡುವುದು ನಮ್ಮ ಹಕ್ಕು. ಸಭೆಯಲ್ಲಿ ಎಲ್ಲಾ ವಿಚಾರ, ಸಮಸ್ಯೆಗಳನ್ನು ವಿವರವಾಗಿ ಹೇಳಿದ್ದೇನೆ. ಅದಕ್ಕೆ ಪರಿಹಾರ ಕೂಡ ಸಿಕ್ಕಿದೆ ಎಂದರು.ಕೆಲವರು ಸಚಿವರ ವರ್ತನೆ ಸರಿ ಇರಲಿಲ್ಲ, ಅದನ್ನು ಸರಿ ಮಾಡಿಕೊಳ್ಳಬೇಕು ಎನ್ನುವುದು ನಮ್ಮ ಒತ್ತಾಯವಾಗಿತ್ತು. ಸದ್ಯ ಯಾವುದೇ ಸಮಸ್ಯೆ ಇಲ್ಲ ಎಂದು ಬಿಆರ್ ಪಾಟೀಲ ಹೇಳಿದರು.
. ಬಿಆರ್ ಪಾಟೀಲ್ ರಾಜೀನಾಮೆ ಪ್ರಸ್ತಾಪ ಮಾಡಿದ್ದಾರೆ ಎನ್ನುವ ವರದಿಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇದೆಲ್ಲಾ ನಿಜವಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದರು. ಆದರೆ, ಬಿಆರ್ ಪಾಟೀಲ ಅವರೇ ರಾಜೀನಾಮೆ ನೀಡುವ ಪ್ರಸ್ತಾಪ ಮಾಡಿದ್ದು ನಿಜ ಎಂದು ಹೇಳಿದ್ದಾರೆ. ಸಂಚಲನ ಸೃಷ್ಟಿಸಿದ್ದ ಪತ್ರ ಸಚಿವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಆರ್ ಪಾಟೀಲ ಪತ್ರ ಬರೆದಿದ್ದರು.



ನಿಮ್ಮ ಕಾಮೆಂಟ್ ಬರೆಯಿರಿ