ದೇಶದ ಪ್ರಧಾನಿ ಆಗುವವರಿಗೆ ಪತ್ನಿ ಇರಬೇಕು, ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿರುವುದು ತಪ್ಪು : ಹೀಗಂತಾರೆ ಲಾಲು ಪ್ರಸಾದ ಯಾದವ್‌

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮದುವೆಯಾಗುವಂತೆ ಸಲಹೆ ನೀಡಿದ ಕೆಲವೇ ದಿನಗಳಲ್ಲಿ, ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಗುರುವಾರ ಯಾರೇ ಪ್ರಧಾನಿಯಾಗಲಿ ಅವರಿಗೆ ಹೆಂಡತಿ ಇರಬೇಕು ಎಂದು ಹೇಳಿದ್ದಾರೆ. ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿ ಉಳಿದುಕೊಳ್ಳುವುದು ತಪ್ಪು ಎಂದು ಹೇಳಿದ್ದಾರೆ.
ವೈದ್ಯಕೀಯ ತಪಾಸಣೆಗಾಗಿ ಅವರು ದೆಹಲಿ ಪ್ರವಾಸದಲ್ಲಿದ್ದು ಅದಕ್ಕೂ ಮೊದಲು ಪಾಟ್ನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಮತ್ತು ರಾಹುಲ್ ಗಾಂಧಿಗೆ ಮದುವೆಯಾಗಲು ಅವರ ಹಿಂದಿನ ಸಲಹೆಯ ಬಗ್ಗೆ ಕೇಳಿದಾಗ ಅವರು ಹೀಗೆ ನೀಡಿದ್ದಾರೆ. “ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿ ಉಳಿಯುವುದು ತಪ್ಪು. ಇದನ್ನು ತೊಡೆದುಹಾಕಬೇಕು” ಎಂದು ಅವರು ಹೇಳಿದರು.
ಜುಲೈ 17-18 ರಂದು ವಿರೋಧ ಪಕ್ಷಗಳ ಸಭೆಗಾಗಿ ಬೆಂಗಳೂರಿಗೆ ಪ್ರಯಾಣಿಸುವುದಾಗಿ ಹೇಳಿದ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಿಂದ ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೊಗೆಯಲು ವೇದಿಕೆ ಸಿದ್ಧಪಡಿಸುವುದಕ್ಕಾಗಿ ಬೆಂಗಳೂರಿಗೆ ತೆರಳುತ್ತಿದ್ದೇನೆ ಎಂದರು.
ರಕ್ತ ಪರೀಕ್ಷೆ ಸೇರಿದಂತೆ ವೈದ್ಯಕೀಯ ಪರೀಕ್ಷೆಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ, ನಂತರ ನಾನು ಮತ್ತೆ ಪಾಟ್ನಾಗೆ ಬರುತ್ತೇನೆ, ನಂತರ ವಿರೋಧ ಪಕ್ಷಗಳ ಸಭೆಗಾಗಿ ಬೆಂಗಳೂರಿಗೆ ಹೋಗುತ್ತೇನೆ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಸರ್ಕಾರದ ಉಚ್ಚಾಟನೆಗೆ ವೇದಿಕೆ ಸಿದ್ಧಪಡಿಸುತ್ತೇನೆ ಎಂದು ಲಾಲು ಯಾದವ್ ಹೇಳಿದ್ದಾರೆ.
ಜುಲೈ 17-18 ರಂದು ಬೆಂಗಳೂರಿನಲ್ಲಿ ಸಮಾನ ಮನಸ್ಕ ವಿರೋಧ ಪಕ್ಷಗಳ ಎರಡನೇ ಸಭೆ ನಡೆಯಲಿದೆ. ಮೊದಲ ಸಭೆ ಜೂನ್ 23 ರಂದು ಪಾಟ್ನಾದಲ್ಲಿ ನಡೆಯಿತು.

ಪ್ರಮುಖ ಸುದ್ದಿ :-   ಮಧುಮೇಹ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ 41 ಔಷಧಗಳ ಬೆಲೆ ಕಡಿಮೆ ಮಾಡಿದ ಸರ್ಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement