ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ.
ಬೆಂಗಳೂರಿನ ವೈಟ್ ಫೀಲ್ಡ್ ಸಮೀಪ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಾರ್ಟ್ ಮೆಂಟ್ ಒಂದರಲ್ಲಿ ಘಟನೆ ನಡೆದಿದ್ದು, ಮೃತರನ್ನು ಪತಿ ವೀರಾರ್ಜುನ ವಿಜಯ (31) ಪತ್ನಿ ಹೇಮಾವತಿ (29) ಹಾಗೂ ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ದಂಪತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಎರಡೂವರೆ ವರ್ಷದ ಮೋಕ್ಷ ಹಾಗೂ ನಾಲ್ಕು ವರ್ಷದ ಸೃಷ್ಟಿ ಎಂಬ ಇಬ್ಬರು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂರು ದಿನಗಳಾದರೂ ಮನೆಯ ಬಾಗಿಲು ತೆರೆಯದಿದ್ದ ಕಾರಣ ಅನುಮಾನಗೊಂಡ ಸ್ಥಳೀಯರು ಕಿಟಕಿ ಮೂಲಕ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ತಕ್ಷಣ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ಕಾರಣ ತಿಳಿದು ಬರಬೇಕಿದೆ.
ನಿಮ್ಮ ಕಾಮೆಂಟ್ ಬರೆಯಿರಿ