ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಧರ್ಮದ ಆಧಾರದಲ್ಲಿ ಮತ ಯಾಚನೆ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶುಕ್ರವಾರ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಿತು.
ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ. ಜನ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123(3)ರ ಅಡಿ ಪ್ರಕರಣ ದಾಖಲಾಗಿದೆ. ಧರ್ಮದ ಆಧಾರದಲ್ಲಿ ಮತಯಾಚನೆ ಮತ್ತು ಈ ಕುರಿತು ವಿಡಿಯೊವೊಂದನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಜಯನಗರ ಠಾಣೆಯಲ್ಲಿ ಸೆಕ್ಷನ್‌ 123(3) ಅಡಿ ಪ್ರಕರಣ ದಾಖಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮತದಾನಕ್ಕೆ ಒಂದು ದಿನ ಮೊದಲು ಏಪ್ರಿಲ್ 25 ರಂದು ತೇಜಸ್ವಿ ಸೂರ್ಯ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಅಯೋಧ್ಯೆಯ (Ayodhya) ಬಾಲ ರಾಮನ ಹಣೆಗೆ ಸೂರ್ಯ ಸ್ಪರ್ಶಿಸುವವೀಡಿಯೊ ಅಪ್ಲೋಡ್‌ ಮಾಡಿದ್ದರು ಹಾಗೂ ರಾಮ ನವಮಿಯಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಮೇಲೆ ಭವ್ಯವಾದ ಸೂರ್ಯ ತಿಲಕವನ್ನು ವೀಕ್ಷಿಸಲು ನಮ್ಮ ಪೀಳಿಗೆಯು ಆಶೀರ್ವದಿಸಲ್ಪಟ್ಟಿದೆ. ಸುಮಾರು 500 ವರ್ಷಗಳ ಕಾಯುವಿಕೆ ಮತ್ತು ಕೋಟಿಗಟ್ಟಲೆ ಭಾರತೀಯರ ಆಶಯವನ್ನು ಪ್ರಧಾನಿ ಈಡೇರಿಸಿದ್ದಾರೆ. ಭಾರತೀಯತೆ ಉಳಿಯಲು ಬಿಜೆಪಿಗೆ ಮತ ನೀಡಿ ಎಂದು ಬರೆದುಕೊಂಡಿದ್ದರು.

ಪ್ರಮುಖ ಸುದ್ದಿ :-   ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಈ ಬಾರಿಯೂ ತೇಜಸ್ವಿ ಸೂರ್ಯ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಅವರ ಕಾಂಗ್ರೆಸ್​ನಿಂದ ಸಚಿವ ರಾಮಲಿಂಗರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಸ್ಪರ್ಧಿಸಿದ್ದಾರೆ. ಶುಕ್ರವಾರ ಮತದಾನ ಮುಗಿದಿದ್ದು, ಇಬ್ಬರು ಭವಿಷ್ಯ ಮತಯಂತ್ರ ಸೇರಿದೆ. ಜೂನ್​ 4ರಂದು ಮತ ಎಣಿಕೆ ನಡೆಯಲಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement